ವಾಣಿ ವಿಲಾಸ ಆಸ್ಪತ್ಪೆಯಲ್ಲಿ 100ಕ್ಕೂ ಹೆಚ್ಚು ಕೋವಿಡ್-19 ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ

ಕೋವಿಡ್‌ ಸೋಂಕು ದಾಳಿ ಆರಂಭಿಸಿದ ನಂತರ ಬೆಂಗಳೂರು ನಗರದ ಬಹುದೊಡ್ಡ ಹೆರಿಗೆ ಆಸ್ಪತ್ರೆಯಾದ ವಾಣಿ ವಿಲಾಸ್‌ನಲ್ಲಿ ಇಲ್ಲಿಯವರೆಗೆ 100ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸಿದೆ.
ವಾಣಿ ವಿಲಾಸ ಆಸ್ಪತ್ರೆ ವೈದ್ಯರು
ವಾಣಿ ವಿಲಾಸ ಆಸ್ಪತ್ರೆ ವೈದ್ಯರು

ಬೆಂಗಳೂರು: ಕೋವಿಡ್‌ ಸೋಂಕು ದಾಳಿ ಆರಂಭಿಸಿದ ನಂತರ ಬೆಂಗಳೂರು ನಗರದ ಬಹುದೊಡ್ಡ ಹೆರಿಗೆ ಆಸ್ಪತ್ರೆಯಾದ ವಾಣಿ ವಿಲಾಸ್‌ನಲ್ಲಿ ಇಲ್ಲಿಯವರೆಗೆ 100ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸಿದೆ.

ಶುಕ್ರವಾರ 103ನೇ ಸೋಂಕಿತ ಗರ್ಭಿಣಿ ಆರೋಗ್ಯಪೂರ್ಣ ಶಿಶುವಿಗೆ ಜನ್ಮ ನೀಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ವೈದ್ಯರು 100ನೇ ಶಿಶುವಿನ ಹೆರಿಗೆ ಮಾಡಿಸಿದ್ದಾರೆ. ವಿಶೇಷವೆಂದರೆ, ಈ ಪೈಕಿ ಯಾವುದೇ ಮಗುವಿಗೆ ಕೋವಿಡ್ ಸೋಂಕು ದೃಢಪಟ್ಟಿಲ್ಲ.

ಈ ವಿಚಾರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, 'ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ  ವಿಕ್ಟೋರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು' ಎಂದಿದ್ದಾರೆ. 

ಮಕ್ಕಳಿಗೆ ಸೋಂಕು ತಗಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಸುಮಾರು 350 ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಯರಿಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲಾ ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್ ಬಂದಿದ್ದು ತಾಯಂದಿರು- ಶಿಶುಗಳು ಆರೋಗ್ಯವಾಗಿದ್ದರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರ್ಭಿಣಿಯರಲ್ಲೂ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು. ಇದು ಆತಂಕಕ್ಕೂ ಕಾರಣವಾಗಿತ್ತು. ಕೆಲವು ಪ್ರಕರಣಗಳಲ್ಲಿ ನವಜಾತ ಶಿಶುಗಳಲ್ಲೂ ಸೋಂಕು ಕಾಣಿಸಿಕೊಂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com