ಅಪ್ರಾಪ್ತ ಬಾಲಕಿಗೆ ಕಿರುಕುಳ ಪ್ರಕರಣ: 49 ವರ್ಷದ ವ್ಯಕ್ತಿಗೆ 5 ವರ್ಷ ಜೈಲು
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ವ್ಯಕ್ತಿಯೋರ್ವನಿಗೆ ಬೆಂಗಳೂರು ನಗರ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
2018 ರಲ್ಲಿ ಈ ಪ್ರಕರಣ ನಡೆದಿದ್ದು, ಗಜೇಂದ್ರ ಎಂಬ ವ್ಯಕ್ತಿ ಟ್ಯೂಷನ್ ನಿಂದ ಮನೆಗೆ ವಾಪಸ್ಸಾಗುತ್ತಿದ್ದ ತನ್ನ ನೆರೆ ಮನೆಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯಾಗಿದ್ದಾನೆ. ಗಜೇಂದ್ರನ ವಿರುದ್ಧ ಕೋಣನಕುಂಟೆ ಪೊಲೀಸರು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಚಾರ್ಜ್ ಶೀಟ್ ದಾಖಲಿಸಿದ್ದರು. ಬಾಲಕಿಯ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದಕ್ಕೆ ಪೊಲೀಸರು ಸೂಕ್ತ ವೈದ್ಯಕೀಯ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ಒದಗಿಸಿದ್ದರು. ಈ ಪ್ರಕರಣ ನಡೆದಾಗ ಸಂತ್ರಸ್ತ ಬಾಲಕಿ 8 ವರ್ಷದವಳಾಗಿದ್ದಳು.
ಕೋರ್ಟ್ ಆತನನ್ನು ದೋಷಿ ಎಂದು ತೀರ್ಪು ನೀಡಿದ್ದು, ಈ ರೀತಿಯ ಪ್ರಕರಣಗಳಲ್ಲಿ ಮಕ್ಕಳ ವಿರುದ್ಧದ ದೌರ್ಜನ್ಯವನ್ನು ಹಗುರವಾಗಿ ಪರಿಗಣಿಸಿದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ ಎಂದು ಕೋರ್ಟ್ ಹೇಳಿದ್ದು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ, ಸಂತ್ರಸ್ತ ಬಾಲಕಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ