ಕೊರೊನಾ ವಿರುದ್ಧ ಸಮರದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಎಲ್ಲ ನೆರವು: ಸಚಿವ ಡಿ.ವಿ. ಸದಾನಂದ ಗೌಡ
ಬೆಂಗಳೂರು: ಕೊರೊನಾ ಮಹಾಮಾರಿಯನ್ನು ಮಣಿಸಲು ರಾಜ್ಯ ಸರಕಾರಗಳಿಗೆ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಕೊರೊನಾ ಮಹಾಮಾರಿ ನಿಯಂತ್ರಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನೇತೃತ್ವದಲ್ಲಿ ನಡೆಸಿದ ಸಚಿವರು, ಸಂಸದರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂ ಡ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಭರವಸೆ ನೀಡಿದರು. ಕೊರೊನಾ ವಿರುದ್ಧದ ಹೋರಾಟದ ವಿಚಾರವಾಗಿ ಕೇಂದ್ರ ಸರ್ಕಾರವು ರಾಜ್ಯಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದೆ. ಇನ್ನೂ ಏನೆಲ್ಲ ಅಗತ್ಯವೋ ಅದನ್ನು ಮಾಡಲು ನಾವು ಸಿದ್ಧರಿದ್ದೇವೆ ಎಂದರು.
ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ನೆರವು ನೀಡಲು ಸರಕಾರ ಬದ್ಧ. ರಾಜ್ಯ ಸರ್ಕಾರ ಕೇಳುವ ಎಲ್ಲಾ ರೀತಿಯ ನೆರವಿಗೆ ಕೇಂದ್ರ ಸರ್ಕಾರದಿಂದ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ