ಮಹಾಂತೇಶ್ ಕೌಜಲಗಿ
ರಾಜ್ಯ
ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿಗೆ ಕೊರೋನಾ ಪಾಸಿಟಿವ್
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಕೊರೋನಾ ಸೋಂಕು ಕಾಣಿಸಿಕೊಂಡ ರಾಜಕಾರಣಿಗಳ ಸಾಲಿಗೆ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ಅವರು ಸೇರ್ಪಡೆಯಾಗಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಕೊರೋನಾ ಸೋಂಕು ಕಾಣಿಸಿಕೊಂಡ ರಾಜಕಾರಣಿಗಳ ಸಾಲಿಗೆ ಬೈಲಹೊಂಗಲ ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ಅವರು ಸೇರ್ಪಡೆಯಾಗಿದ್ದಾರೆ.
ಶಾಸಕ ಮಹಾಂತೇಶ್ ಕೌಜಲಗಿ ಅವರಿಗೆ ಇಂದು ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರ ಸಂಪರ್ಕದಲ್ಲಿದ್ದ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.
ಎರಡು ದಿನದ ಹಿಂದಷ್ಟೇ ಶಾಸಕ ಕೌಜಲಗಿ ಅವರು ತಾಲೂಕು ಮಟ್ಟದ ಕೋವಿಡ್ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದರು. ಇದೀಗ ಆ ಸಭೆಯಲ್ಲಿ ಭಾಗವಹಿಸಿದ ತಹಶೀಲ್ದಾರ್ ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಹೋಂ ಕ್ವಾರೆಂಟೈನ್ ಆಗಬೇಕಾದ ಪರಿಸ್ಥಿತಿ ಬಂದಿದೆ.
ಬೈಲಹೊಂಗಲ ತಾಲೂಕಿನಲ್ಲಿ ಕಿತ್ತೂರು ವಿಧಾನಸಭಾ ಕ್ಷೇತ್ರದ ಕೆಲ ಪ್ರದೇಶಗಳು ಕೂಡ ಬರುವುದರಿಂದ ತಾಲೂಕು ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಕೌಜಲಗಿ ಅವರೊಂದಿಗೆ ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡಗೌಡರ್ ಸಹ ಪಾಲ್ಗೊಳ್ಳುತ್ತಿದ್ದರು. ಹೀಗಾಗಿ ಅವರನ್ನು ಕೂಡ ಕ್ವಾರೆಂಟೈನ್‌ಗೆ ಒಳಪಡಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ