ಸಾಮಾಜಿಕ ಅಂತರ ಕಾಪಾಡಿಕೊಳ್ಳದವರ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ

ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಪ್ರಭಾವಿ ರಾಜಕಾರಣಿಗಳು ಸೇರಿದಂತೆ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಪ್ರಭಾವಿ ರಾಜಕಾರಣಿಗಳು ಸೇರಿದಂತೆ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಾರಿಗೊಳಿಸಿರುವ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಯಮವನ್ನು ರಾಜಕೀಯ ನಾಯಕರು ಪಾಲಿಸುತ್ತಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.

ಅರ್ಜಿದಾರರ ಪರ ಹಾಜರಾದ ವಕೀಲ ಜಿ.ಆರ್‌.ಮೋಹನ್‌, ರಾಜಕೀಯ ನಾಯಕರೊಬ್ಬರ ಪುತ್ರನ ವಿವಾಹ, ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ರಾಜಕೀಯ ರ್ಯಾಲಿಗಳ ಸಂದರ್ಭದಲ್ಲಿ ಪ್ರಭಾವಿ ವ್ಯಕ್ತಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದರ ಭಾವಚಿತ್ರಗಳನ್ನು ಸಲ್ಲಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com