

ಬೆಂಗಳೂರು: ವೈವಾಹಿಕ ಜಾಲತಾಣ ಮ್ಯಾಟ್ರಿಮೋನಿಯಲ್ಲಿ ಯುವತಿಯರಿಗೆ ವಿವಾಹವಾಗುವುದಾಗಿ ನಂಬಿಸಿ ವಂಚಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹೇಶ್ ಆಲಿಯಾಸ್ ಜಗನ್ನಾಥ್ (29) ಬಂಧಿತ ಆರೋಪಿ. ಬಂಧಿತನಿಂದ 6.8 ಲಕ್ಷ ನಗದು, ಒಂದು ಕಾರು, ಎರಡು ಮೊಬೈಲ್, ಸಿಮ್ ಕಾರ್ಡ್, ಎಟಿಎಂ ಕಾರ್ಡ್, ಪಾಸ್ ಬುಕ್ ವಶಕ್ಕೆ ಪಡೆಯಲಾಗಿದೆ.
ವಿಚ್ಛೇದಿತ ಮಹಿಳೆಯೊಬ್ಬರ ದೂರಿನ ತನಿಖೆ ವೇಳೆ ಮಹೇಶ್ ಸಿಕ್ಕಿಬಿದ್ದಿದ್ದಾನೆ. ಮ್ಯಾಟ್ರಿಮೋನಿಯಲ್ಲಿ ವಿಚ್ಛೇದಿತ ಮಹಿಳೆಯನ್ನ ಪರಿಚಯ ಮಾಡಿಕೊಂಡು ಅವರನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.