ಬೆಂಗಳೂರು: ಕಂಬದಲ್ಲಿ ವಿದ್ಯುತ್ ಪ್ರವಹಿಸಿ 8 ವರ್ಷದ ಬಾಲಕಿ ಸಾವು

ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಕಾವಲಬೈರಸಂದ್ರದಲ್ಲಿ ರಾತ್ರಿ ವಿದ್ಯುತ್ ಅವಘಡದಿಂದ 8 ವರ್ಷದ ಬಾಲಕಿ ಫಾತಿಮಾ ಮೃತಪಟ್ಟಿದ್ದಾಳೆ.

ರಾತ್ರಿ 8 ಗಂಟೆಯ ಸಮಯದಲ್ಲಿ ಮನೆಯ ಮುಂಭಾಗ ಫಾತಿಮಾ ಆಟವಾಡುತ್ತಿದ್ದಾಗ ವಿದ್ಯುತ್ ಕಂಬ ಮುಟ್ಟಿದ್ದು, ಮಳೆಯಿಂದಾಗಿ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೆಜೆಸ್ಟಿಕ್, ಮಲ್ಲೇಶ್ವರಂ, ವಿಧಾನಸೌಧ, ಕಾರ್ಪೋರೇಷನ್ ಸರ್ಕಲ್, ಎಂಜಿ ರಸ್ತೆ, ಶಿವಾಜಿನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ನಿನ್ನೆ ರಾತ್ರಿ ಧಾರಾಕಾರವಾಗಿ ಮಳೆ ಸುರಿದಿತ್ತು. ಇದರಿಂದ ನೂರಾರು ಮನೆಗಳಿಗೆ ನೀರು ನುಗ್ಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com