ಉಡುಪಿ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು, ಪುತ್ತಿಗೆ ಮಠ ಸೀಲ್ ಡೌನ್!

 ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೂ ಕೊರೋನಾ ಕಾಲಿಟ್ಟಿದೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊರೋನಾ ಸೋಂಕು ದೃಢಪಟ್ಟಿದೆ.
ಸುಗುಣೇಂದ್ರ ತೀರ್ಥ ಸ್ವಾಮೀಜಿ
ಸುಗುಣೇಂದ್ರ ತೀರ್ಥ ಸ್ವಾಮೀಜಿ
Updated on

ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೂ ಕೊರೋನಾ ಕಾಲಿಟ್ಟಿದೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊರೋನಾ ಸೋಂಕು ದೃಢಪಟ್ಟಿದೆ.

ಮಠದ ಮೂಲಗಳ ಪ್ರಕಾರ, ಜುಲೈ 20ರಂದು ಸ್ವಾಮೀಜಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಂತರ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಪುತ್ತಿಗೆ ಶ್ರೀಗಳು 15 ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ಆಗಮಿಸಿದ ಶ್ರೀಗಳಿಗೆ ಕೆಲ ದಿನಗಳಿಂದ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.  

ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆ ಮಠವನ್ನು ಸೀಲ್ ಡೌನ್ ಮಾಡಲಾಗಿದೆ.
ಕೊರೋನಾ ಸಂದರ್ಭದಲ್ಲಿಯೂ ಅನೇಕ ಭಕ್ತರು ಮಠಕ್ಕೆ ಆಗಮಿಸಿ, ಸ್ವಾಮೀಜಿಯಿಂದ ಆಶೀರ್ವಾದ ಪಡೆದುಕೊಂಡಿದ್ದರು. ಇದರಿಂದಾಗಿ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com