ರಾಜ್ಯದಲ್ಲಿ ಕೊರೋನಾಗೆ ಇಂದು 55 ಬಲಿ, ಬೆಂಗಳೂರಿನಲ್ಲಿ 2,050 ಸೇರಿ 4,764 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 55 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 15 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,050 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4,764 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 75,833ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು ಬೆಂಗಳೂರಿನಲ್ಲಿ 812 ಜನ ಚೇತರಿಕೆ ಸೇರಿ ರಾಜ್ಯದಲ್ಲಿ 1780 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಒಟ್ಟು 75,833 ಸೋಂಕಿತರ ಪೈಕಿ 27,239 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 47,096 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಂದೇ ದಿನದಲ್ಲಿ 48,140 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 11,12,874 ಟೆಸ್ಟ್ ನಡೆಸಲಾಗಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ 2050 ಪ್ರಕರಣಗಳು ವರದಿಯಾಗಿದ್ದು, 27969 ಸಕ್ರಿಯ ಪ್ರಕರಣಗಳಿವೆ. ಉಡುಪಿಯಲ್ಲಿ 281, ಬೆಳಗಾವಿಯಲ್ಲಿ 219, ಕಲಬುರಗಿಯಲ್ಲಿ 175, ದಕ್ಷಿಣ ಕನ್ನಡದಲ್ಲಿ 162, ಧಾರವಾಡದಲ್ಲಿ 158, ಮೈಸೂರಿನಲ್ಲಿ 145, ಬೆಂಗಳೂರು ಗ್ರಾಮಾಂತರದಲ್ಲಿ 139, ರಾಯಚೂರಿನಲ್ಲಿ 135, ಬಳ್ಳಾರಿಯಲ್ಲಿ 134, ಚಿಕ್ಕಬಳ್ಳಾಪುರದಲ್ಲಿ 110 ಪ್ರಕರಣಗಳು ವರದಿಯಾಗಿವೆ.
ದಾವಣಗೆರೆಯಲ್ಲಿ 96, ಕೋಲಾರದಲ್ಲಿ 88, ಚಿಕ್ಕಮಗಳೂರಿನಲ್ಲಿ 82, ಬೀದರ್ನ ಲ್ಲಿ 77, ಹಾಸನದಲ್ಲಿ 72, ಗದಗದಲ್ಲಿ 71, ಬಾಗಲಕೋಟೆಯಲ್ಲಿ 70, ಉತ್ತರಕನ್ನಡದಲ್ಲಿ 63, ಶಿವಮೊಗ್ಗದಲ್ಲಿ 59, ವಿಜಯಪುರ, ತುಮಕೂರಿನಲ್ಲಿ ತಲಾ 52, ಹಾವೇರಿಯಲ್ಲಿ 50, ರಾಮನಗರದಲ್ಲಿ 45, ಯಾದಗಿರಿಯಲ್ಲಿ 43, ಚಿತ್ರದುರ್ಗದಲ್ಲಿ 40, ಮಂಡ್ಯದಲ್ಲಿ 37, ಚಾಮರಾಜನಗರದಲ್ಲಿ 31, ಕೊಪ್ಪಳದಲ್ಲಿ 21, ಕೊಡಗಿನಲ್ಲಿ 7 ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


