ಸೋಂಕಿತ ವ್ಯಕ್ತಿ ಸಾವು: ಬಿಮ್ಸ್ ಆಸ್ಪತ್ರೆಯಲ್ಲಿ ದಾಂಧಲೆ, ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಆಕ್ರೋಶ

ಕೊರೋನಾ ಸೋಂಕಿನಿಂದ ಅಥಣಿ ಮೂಲದವರೆನ್ನಲಾದ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಬೆಳಗಾವಿ ಜಿಲ್ಲಾ ಆಸ್ಪತ್ರೆ (ಬಿಮ್ಸ್) ಆವರಣದಲ್ಲಿ ನಿಲ್ಲಿಸಿದ್ದ ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ. 
ಆ್ಯಂಬುಲೆನ್ಸ್'ಗೆ ಬೆಂಕಿ ಆಕ್ರೋಶ
ಆ್ಯಂಬುಲೆನ್ಸ್'ಗೆ ಬೆಂಕಿ ಆಕ್ರೋಶ

ಬೆಳಗಾವಿ: ಕೊರೋನಾ ಸೋಂಕಿನಿಂದ ಅಥಣಿ ಮೂಲದವರೆನ್ನಲಾದ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಬೆಳಗಾವಿ ಜಿಲ್ಲಾ ಆಸ್ಪತ್ರೆ (ಬಿಮ್ಸ್) ಆವರಣದಲ್ಲಿ ನಿಲ್ಲಿಸಿದ್ದ ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ. 

ದುಷ್ಕರ್ಮಿಗಳು ಆಸ್ಪತ್ರೆ ಸಿಬ್ಬಂದಿ ಜೊತೆಗೆ ವಾಗ್ವಾದ ನಡೆಸಿದ್ದು, ಹಲ್ಲೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ, ವೈದ್ಯರ ಕಾರುಗಳಿಗೂ ಹಾನಿ ಮಾಡಿದ್ದಾರೆಂದು ತಿಳಿದುಬಂದಿದೆ. 

ಸೋಂಕಿತ  ವ್ಯಕ್ತಿಯು ಜು.19ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸೋಂಕಿತ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಗೆ ರಾತ್ರಿ ವೇಳೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಈ ವೇಳೆ ಸಿಬ್ಬಂದಿ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆಂದು ಹೇಳಲಾಗುತ್ತಿದೆ. ನಂತರ ಆಸ್ಪತ್ರೆ ಮುಂದೆ ನಿಲ್ಲಿಸಿದ್ದ ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು, ವೈದ್ಯರ ಕಾರುಗಳಿಗೂ ಕಲ್ಲು ತೂರಿದ್ದಾರೆಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com