ಕೋಲಾರ: ಬೈಕ್ ಅಪಘಾತದಲ್ಲಿ ಎಎಸ್ಐ ಸಾವು

ಎರಡು ಬೈಕ್‍ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಓರ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕೋಲಾರ: ಎರಡು ಬೈಕ್‍ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಓರ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ. 

ಶ್ರೀನಿವಾಸಪುರ ಪೊಲೀಸ್ ಠಾಣೆಯ ಎಎಸ್‍ಐ ಮಂಜುನಾಥ್ (52) ಮೃತಪಟ್ಟಿದ್ದಾರೆ. 

ಕೋಲಾರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಎದುರಿಗೆ ಬಂದ ಬೈಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com