ಗೋವಿಂದ್ ಕಾರಜೋಳ
ರಾಜ್ಯ
ಕೊರೋನಾ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿರುವವರಿಗೆ ದಿನಕ್ಕೆ 75 ರೂ. ಕೂಲಿ: ಉಪಮುಖ್ಯಮಂತ್ರಿ ಕಾರಜೋಳ
ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಹೆಚ್ಚು ನಿಗಾವಹಿಸಿ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು: ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಹೆಚ್ಚು ನಿಗಾವಹಿಸಿ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಪಾಡುವ ದಿಸೆಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿರುವ 14 ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಒಟ್ಟು 2733 ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲಾಗಿದೆ. ಇವರಿಗೆ ಪ್ರತಿನಿತ್ಯ 75 ರೂ ಕೂಲಿ ನೀಡಲಾಗುತ್ತಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ 673 ಜನರಿದ್ದು, ಈ ಕೇಂದ್ರದಲ್ಲಿ ಪ್ರತ್ಯೇಕ ಆಸ್ಪತ್ರೆ, ಇಬ್ಬರು ವೈದ್ಯರು ಹಾಗೂ 8 ನರ್ಸ್‍ಗಳಿದ್ದಾರೆ. ಎಲ್ಲಾ ಅಗತ್ಯ ಔಷಧಿಯೂ ಲಭ್ಯವಿದೆ. ಹೆಚ್ಚಿನ ಚಿಕಿತ್ಸೆಗೆ ಅನುಕೂಲವಾಗುವಂತೆ ಒಂದು ಪತ್ಯೇಕ ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ