ರಾಜ್ಯ

ಮೈಸೂರು: ಕೊರೊನಾ ಸೋಂಕಿತ ಮನೆಯಲ್ಲೇ ಆತ್ಮಹತ್ಯೆ

ಮೈಸೂರು: ಕೊರೊನಾ ಸೋಂಕಿತ ಮನೆಯಲ್ಲೇ ಆತ್ಮಹತ್ಯೆ
ಆತ್ಮಹತ್ಯೆ
Published On :

ಮೈಸೂರು: ಕೊರೊನಾ ಸೋಂಕಿತ ವ್ಯಕ್ತಿ ಓರ್ವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜೆ.ಕೆ.ಟೈರ್ಸ್ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದ 57 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವರು. ಜು. 19ರಂದು ಇವರಿಗೆ ಕೊರೊನಾ ದೃಢಪಟ್ಟಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಜು. 23ರಂದು ಹೋಂ ಐಸೊಲೇಷನ್‌ ಚಿಕಿತ್ಸೆ ಪಡೆಯುವಂತೆ ವೈದ್ಯರು ಅವರಿಗೆ ಸೂಚಿಸಿದ್ದರು.

ಗುರುವಾರ ರಾತ್ರಿ ಅವರು ಗೋಕುಲಂನಲ್ಲಿರುವ ತಮ್ಮ ನಿವಾಸಕ್ಕೆ ಬಂದಿದ್ದು, ಮಹಡಿಯ ಕೋಣೆಯೊಂದರಲ್ಲಿ ಪ್ರತ್ಯೇಕವಾಗಿ ಊಟ ಮಾಡಿ ಮಲಗಿದ್ದರು. ಶುಕ್ರವಾರ ಬೆಳಿಗ್ಗೆ ಕುಟುಂಬಸ್ಥರು ಉಪಾಹಾರ ನೀಡಲು ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಕೊರೋನಾ ಸೋಂಕು ಇರುವುದು ಖಾತರಿಯಾದ ಬಳಿಕ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿ.ವಿ ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.