ನಾಗರ ಪಂಚಮಿ ಹಬ್ಬ: ದೇವರು ಎಲ್ಲ ದುರಿತಗಳನ್ನು ಪರಿಹರಿಸಲಿ- ಮುಖ್ಯಮಂತ್ರಿ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಗರಪಂಚಮಿ ಹಬ್ಬದ ಶುಭಾಶಯ ಕೋರಿದ್ದಾರೆ.
ನಾಗರ ಪಂಚಮಿ
ನಾಗರ ಪಂಚಮಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಗರಪಂಚಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ನಾಗರಪಂಚಮಿ ಹಬ್ಬದ ಹಾರ್ದಿಕ ಶುಭಕಾಮನೆಗಳು. ದೇವರು ಎಲ್ಲರಿಗೂ ಸಂತೋಷ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳು ಪರಿಹಾರವಾಗಿ ಸುಖ, ಸಮೃದ್ಧಿಗಳು ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ದೇವರು ಎಲ್ಲ ದುರಿತಗಳನ್ನು ಪರಿಹರಿಸಿ, ಎಲ್ಲರಿಗೂ ಸುಖ, ಸಂತೋಷ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ನಾಡಿಗೆ ಮಂಗಳವನ್ನು ಉಂಟುಮಾಡಲಿ ಎಂದು ಪ್ರಾರ್ಥಿಸೋಣ. ಮನೆಗಳಲ್ಲಿಯೇ ದೇವರನ್ನು ಪ್ರಾರ್ಥಿಸಿ, ಸಾಮಾಜಿಕ ಅಂತರ ಸೇರಿದಂತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯ ಪಾಲಿಸಿ ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನಾಡಿನ ಸಮಸ್ತ ಜನತೆಗೆ ನಾಗರ ಪಂಚಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಗಾರಾಧನೆಗೆ ಅತ್ಯಂತ ಪವಿತ್ರ ದಿನವಾದ ಇಂದು ನಾಗದೇವತೆಗಳ ಅನುಗ್ರಹದಿಂದ ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ನಾಡಿನ ಸಮಸ್ತ ಜನತೆಗೆ ನಾಗರ ಪಂಚಮಿಯ ಹಾರ್ದಿಕ ಶುಭಾಶಯಗಳು. ನಾಗದೇವತೆಗಳು ಸರ್ವರಿಗೂ ಸುಖ - ಶಾಂತಿ, ನೆಮ್ಮದಿಯನ್ನು ದಯಪಾಲಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com