ಇನ್ನುಮುಂದೆ ಪಿಎಂಎಸ್‌ಎಸ್‌ಐ ಆಸ್ಪತ್ರೆಯಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸೆ

ಇಷ್ಟು ದಿನ ಕೋವಿಡ್‌ ಚಿಕಿತ್ಸೆಗೆ ಬಳಕೆಯಾಗುತ್ತಿದ್ದ ಪಿಎಂಎಸ್‌ಎಸ್‌ಐ ಆಸ್ಪತ್ರೆಯನ್ನು ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಇಷ್ಟು ದಿನ ಕೋವಿಡ್‌ ಚಿಕಿತ್ಸೆಗೆ ಬಳಕೆಯಾಗುತ್ತಿದ್ದ ಪಿಎಂಎಸ್‌ಎಸ್‌ಐ ಆಸ್ಪತ್ರೆಯನ್ನು ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಸುಮಾರು 180 ಹಾಸಿಗೆಗಳ ಸಾಮರ್ಥ್ಯದ ಪ್ರಧಾನಮಂತ್ರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ಪಿಎಂಎಸ್‌ಎಸ್‌ಐ ) ಯ ಉದ್ಘಾಟನೆ ಕೋವಿಡ್ ಕಾರಣದಿಂದ ವಿಳಂಬವಾಗಿತ್ತು . ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರನ್ನು ಕ್ವಾರೆಂಟೈನ್ ಮಾಡುವ ಉದ್ದೇಶಕ್ಕಾಗಿ ಇಷ್ಟು ದಿನ ಆಸ್ಪತ್ರೆಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿತ್ತು .

ಬೆಂಗಳೂರು ನಗರದಲ್ಲಿ ಕೋವಿಡ್ ಸಮಸ್ಯೆ ಇಲ್ಲದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗದೆ , ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಹಿನ್ನಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಈ ವಿಚಾರವನ್ನು ಪ್ರಸ್ತಾಪಿಸಿ , ಆಸ್ಪತ್ರೆಯಲ್ಲಿ ಕ್ಯಾರೆಂಟೈನ್ ಮಾಡಲಾಗಿರುವ ವೈದ್ಯರನ್ನು ಸಮೀಪದ ಹೋಟೆಲ್‌ಗೆ ಸ್ಥಳಾಂತರ ಮಾಡುವಂತೆ ಮನವಿ ಮಾಡಿದ್ದರು.

ಅದರಂತೆ ಮನವಿಗೆ ಸ್ಪಂದಿಸಿ ಶುಕ್ರವಾರದಿಂದ ಪಿಎಂಎಸ್‌ಎಸ್‌ಐ ಆಸ್ಪತ್ರೆಯನ್ನು ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಕೆ ಮಾಡುವಂತೆ ಸ್ಥಳದಲ್ಲೇ ಆದೇಶ ನೀಡಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳನ್ನು ಜಮೀರ್ ಅಹ್ಮದ್ ಅಭಿನಂದಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com