ಕೇರ್ ಟೇಕರ್ ನಿಂದ ಕೊರೋನಾ ಸೋಂಕು ತಗುಲಿ ಐಸಿಯುನಲ್ಲಿದ್ದ 105 ವರ್ಷದ ವೃದ್ಧ ಸಾವು

ರಾಜ್ಯದಲ್ಲಿ ಇತ್ತೀಚೆಗೆ 100 ವರ್ಷದ ಅಜ್ಜಿ ಕೊರೋನಾದಿಂದ ಗುಣಮುಖರಾಗಿದ್ದರು. ಆದರೆ, 105 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಾವನ್ನಪ್ಪಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ 100 ವರ್ಷದ ಅಜ್ಜಿ ಕೊರೋನಾದಿಂದ ಗುಣಮುಖರಾಗಿದ್ದರು. ಆದರೆ, 105 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಾವನ್ನಪ್ಪಿದ್ದಾರೆ. 

ಬಸವೇಶ್ವರ ನಗರದ ಶತಾಯುಷಿ ವೃದ್ಧರೊಬ್ಬರಿಗೆ ಕೊರೋನಾ ಸೋಂಕು ತಗುಲಿತ್ತು. ನಂತರ ಅವರನ್ನು ಬಸವೇಶ್ವರ ನಗರದ ಪ್ರಿಸ್ಟಿನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ವೃದ್ಧರು ಮೃತಪಟ್ಟಿದ್ದಾರೆ. 

105 ವರ್ಷದ ಅಜ್ಜನನ್ನು ಕೇರ್ ಟೇಕರ್ ಒಬ್ಬರು ನೋಡಿಕೊಳ್ಳುತ್ತಿದ್ದರು. ಈ ಕೇರ್ ಟೇಕರ್'ಗೆ ಕೊರೋನಾ ದೃಢವಾಗಿತ್ತು. ಇವರಿಂದ ವೃದ್ಧರಿಗೂ ಸೋಂಕು ಹರಡಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಕೋವಿಡ್ ಟೆಸ್ಟ್ ಮಾಡಿಸಿದಾಗ ಮಂಗಳವಾರ ಪಾಸಿಟಿವ್ ಬಂದಿತ್ತು. ಆಕ್ಸಿಜನ್ ಲೆವೆಲ್ ಕಡಿಮೆಯಾಗಬಹುದು ಎಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com