35 ಸಿಬ್ಬಂದಿಗೆ ಕೋವಿಡ್‌ ಸೋಂಕು; ಧಾರವಾಡದ ಟಾಟಾ ಮಾರ್ಕೋಪೋಲೋ ಘಟಕ 8 ದಿನ ಸ್ಥಗಿತ

ನಗರದ ಹೊರವಲಯದಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಮಾರ್ಕೋಪೋಲೋ ಘಟಕದ 35 ಸಿಬ್ಬಂದಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಘಟಕವನ್ನು 8 ದಿನಗಳ ಕಾಲ ಸ್ಥಗಿತಗೊಳಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಧಾರವಾಡ: ನಗರದ ಹೊರವಲಯದಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಮಾರ್ಕೋಪೋಲೋ ಘಟಕದ 35 ಸಿಬ್ಬಂದಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಘಟಕವನ್ನು 8 ದಿನಗಳ ಕಾಲ ಸ್ಥಗಿತಗೊಳಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. 

ಟಾಟಾ ಮಾರ್ಕೋಪೋಲೋ ಆಡಳಿತ ಮಂಡಳಿ ಸ್ವಯಂ ಪ್ರೇರಿತವಾಗಿ ಈ ನಿರ್ಧಾರ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟಿಲ್‌ ಸೋಮವಾರ ಮಾಹಿತಿ ನೀಡಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಘಟಕದ 35 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಅವರೆಲ್ಲರನ್ನೂ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟಕಕ್ಕೆ ಸೋಂಕು ನಿವಾರಣಾ ಔಷಧ ಸಿಂಪಡಿಸಲಾಗಿದ್ದು, ಸೋಂಕು ಹರಡದಂತೆ ಎಲ್ಲಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಂಪನಿ ಹೇಳಿಕೆ ನೀಡಿದೆ. 

ತಮ್ಮಿಂದ ಕುಟುಂಬ ಸದಸ್ಯರಿಗೆ ಕೂಡ ಸೋಂಕು ಹರಡುತ್ತದೆ ಎಂಬ ಭಯದಿಂದ ಪತ್ನಿ ಹಾಗೂ ಪುತ್ರಿಗೆ ವಿಷ ನೀಡಿ, ಸಿಬ್ಬಂದಿ   ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ಎಚ್ಚೆತ್ತ ಕಂಪನಿ, ಉಳಿದ ಸಿಬ್ಬಂದಿಗೆ ಧೈರ್ಯ ತುಂಬುವ ಸಲುವಾಗಿ ಡಿಮಾನ್ಸ್‌ ನ ಮನಶಾಸ್ತ್ರಜ್ಞರನ್ನು ನೇಮಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com