

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ ರಾಜಕಾರಣಿಗಳು, ಸಿನಿಮಾ ನಟರ ವಿರುದ್ಧ ಕಾನೂನು ಕ್ರಮ ಜರುಗಿಸದ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ಸೆಲೆಬ್ರಿಟಿಗಳು, ರಾಜಕಾರಣಿಗಳಿಗೇನು ಪ್ರತ್ಯೇಕ ಕಾನೂನುಗಳಿವೆಯೇ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ
ತೆಗೆದುಕೊಂಡಿದೆ.
ಲೆಜಿಟ್ ಫೌಂಡೇಷನ್ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅಜಿರ್ಗಳನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಮಾಸ್ಕ್ ಧರಿಸದೆ, ವ್ಯಕ್ತಿಗತ ಅಂತರ ಪಾಲಿಸದೆ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಸಿನಿಮಾ ನಟರು ಹಾಗೂ ರಾಜಕಾರಣಿಗಳ ವಿರುದ್ಧದ ಕೈಗೊಂಡ ಕಾನೂನು ಕ್ರಮಗಳ ಕುರಿತ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.