ಬಿಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಂತಹ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳಲು ಸುಧಾಕರ್ ಸೂಚನೆ

ಬಿಮ್ಸ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಿನ್ನೆ o2‌ ಸಿಲಿಂಡರ್‌ ಸ್ಫೋಟಗೊಂಡು ಇಂಟರ್ನ್, ನರ್ಸ್‌ ಹಾಗೂ ವಾರ್ಡ್‌ ಬಾಯ್‌ಗಳ ಕೈ ಮತ್ತು ಕಾಲುಗಳಿಗೆ ಸುಟ್ಟ ಗಾಯಗಳಾವಿವೆ ಎಂದು ತಿಳಿದು ನನಗೆ ತುಂಬಾ ನೋವಾಗಿದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. 
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ಬಿಮ್ಸ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಿನ್ನೆ‌ ಸಿಲಿಂಡರ್‌ ಸ್ಫೋಟಗೊಂಡು ಇಂಟರ್ನ್, ನರ್ಸ್‌ ಹಾಗೂ ವಾರ್ಡ್‌ ಬಾಯ್‌ಗಳ ಕೈ ಮತ್ತು ಕಾಲುಗಳಿಗೆ ಸುಟ್ಟ ಗಾಯಗಳಾವಿವೆ ಎಂದು ತಿಳಿದು ನನಗೆ ತುಂಬಾ ನೋವಾಗಿದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. 

ಇಂತಹ ಘಟನೆಗಳು ಇನ್ಮುಂದೆ ಘಟಿಸದಂತೆ ಕ್ರಮ ವಹಿಸಲು ಸೂಚಿಸಿದ್ದೇನೆ. ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೀನೆಂದು ಹೇಳಿದ್ದಾರೆ.

ನಿನ್ನೆ ಮಧ್ಯಾಹ್ನ ಬೆಳಗಾವಿ ಜಿಲ್ಲಾಸ್ಪತ್ರೆ -ಬಿಮ್ಸ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಆಸ್ಪತ್ರೆಯ ತುರ್ತು ಚಿಕಿತ್ಸೆ ಘಟಕದಲ್ಲಿ ರೋಗಿಗೆ ಆಕ್ಸಿಜನ್ ಹಚ್ಚುವಾಗ ಸಿಲಿಂಡರ್ ಗ್ಯಾಸ್ ಮತ್ತು ಸ್ಯಾನಿಟೈಸರ್ ಕೂಡಿಕೊಂಡಿದ್ದರಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಓರ್ವ ವೈದ್ಯ ಹಾಗೂ ವಾರ್ಡ್ ಬಾಯ್ ಕೈಗೆ ಗಾಯವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com