ಬೆಳಗಾವಿ: ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಬಂಧನಕ್ಕೊಳಗಾಗಿದ್ದ 22 ಮಂದಿ ಪೈಕಿ 13 ಮಂದಿಯಲ್ಲಿ ಕೊರೋನಾ!

ನಗರದ ಜಿಲ್ಲಾಸ್ಪತ್ರೆ (ಬಿಮ್ಸ್) ಆವರಣದಲ್ಲಿ ಜು.21ರಂದು ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಹಾಗೂ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 22 ಮಂದಿ ಆರೋಪಿಗಳ ಪೈಕಿ 13 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ನಗರದ ಜಿಲ್ಲಾಸ್ಪತ್ರೆ (ಬಿಮ್ಸ್) ಆವರಣದಲ್ಲಿ ಜು.21ರಂದು ಆ್ಯಂಬುಲೆನ್ಸ್'ಗೆ ಬೆಂಕಿ ಹಚ್ಚಿ ಹಾಗೂ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 22 ಮಂದಿ ಆರೋಪಿಗಳ ಪೈಕಿ 13 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. 

22 ಮಂದಿ ಪೈಕಿ 20 ಆರೋಪಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇದರಲ್ಲಿ 13 ಜನರಲ್ಲಿ ಭಾನುವಾರ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. 

ಇನ್ನುಳಿದ ಇಬ್ಬರು ಆರೋಪಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸುವುದು ಬಾಕಿ ಇದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

ರೋಗಿ ಸಾವಿಗೆ ವೈದ್ಯರೇ ಕಾರಣ ಎಂದು ಬಿಮ್ಸ್ ಆಸ್ಪತ್ರೆಯಲ್ಲಿ ದಾಂಧನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ 7 ಹಾಗೂ ಶನಿವಾರ ಓರ್ವ ಸೇರಿ 8 ಮಂದಿ ಆರೋಪಿಗಳನ್ನು ಎಪಿಎಂಪಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದರು. 

ಘಟನೆ ನಡೆದ ಮರುದಿನವೇ ಪೊಲೀಸರು 14 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com