63 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಡಿಸಿಎಂ ಡಾ. ಅಶ್ವಥ್ ನಾರಾಯಣ

ಜಿಲ್ಲಾ ಕೇಂದ್ರದಲ್ಲಿ 63 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸುಜ್ಜಿತ ಆಸ್ಪತ್ರೆಯ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ಅವರು ಪರಿಶೀಲನೆ ನಡೆಸಿದರು.
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ

ರಾಮನಗರ: ಜಿಲ್ಲಾ ಕೇಂದ್ರದಲ್ಲಿ 63 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸುಜ್ಜಿತ ಆಸ್ಪತ್ರೆಯ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ಅವರು ಪರಿಶೀಲನೆ ನಡೆಸಿದರು.

ಬೆಂಗಳೂರಿನಿಂದ ಬರುವಾಗಲೇ ತಮ್ಮ ಜತೆಯಲ್ಲಿ ಮಣಿಪಾಲ್‌ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಮುರಳಿ, ಡಾ.ಶ್ರೀರಾಮ ಅವರನ್ನು ಕರೆದುಕೊಂಡು ಬಂದಿದ್ದ ಅವರು,ಅವರೊಂದಿಗೆ ಇಡೀ ಆಸ್ಪ್ರತ್ರೆಯನ್ನು ಸುತ್ತುಹಾಕಿದರು ಹಾಗೂ 6 ತಿಂಗಳಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಮಣಿಪಾಲ್‌ ಆಸ್ಪತ್ರೆಯ ತಜ್ಞರು ಹೊಸ ಆಸ್ಪತ್ರೆಗಳನ್ನು ಸಿದ್ಧಪಡಿಸುವುದರಲ್ಲಿ ಪರಿಣಿತಿ ಹೊಂದಿದ್ದು,ಇಂತಹ ಆಸ್ಪತ್ರೆ ನಿರ್ಮಾಣಕ್ಕೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಜಾಗತಿಕ ಗುಣಮಟ್ಟದ ಎಲ್ಲ ಸೌಲಭ್ಯಗಳು ಈ ಆಸ್ಪತ್ರೆಯಲ್ಲಿ ಇರುತ್ತವೆ. ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಪರಿಕರಗಳನ್ನು ಅಳವಡಿಸಲಾಗುವುದು. ಬೆಂಗಳೂರು- ಮೈಸೂರು ರಸ್ತೆಯ ಆಯಕಟ್ಟಿನಲ್ಲಿರುವ ಈ ಆಸ್ಪತ್ರೆಯನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ರೂಪಿಸಲಾಗುವುದು. ಇದಕ್ಕೆ ಸಂಬಂಧಿಸಿ ತಜ್ಞ ವೈದ್ಯರ ಜತೆ ನಿರಂತರವಾಗಿ ಮಾತುಕತೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು. ಜಿಲ್ಲಾಧಿಕಾರಿ ಅರ್ಚನಾ, ಸಿಇಒ ಇಕ್ರಂ, ಡಿಎಚ್ ಒ ಡಾ. ನಿರಂಜನ ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com