ಕಂಫರ್ಟ್‌ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ: ಇಬ್ಬರು ಮಹಿಳೆಯರ ರಕ್ಷಣೆ, ಮೂವರ ಬಂಧನ

ವೇಶ್ಯಾವಾಟಿಕೆ ನಡೆಯುತ್ತಿದ್ದ ಬನ್ನೇರುಘಟ್ಟ ಮುಖ್ಯರಸ್ತೆಯ ಕಂಫರ್ಟ್‌ ಹೋಟೆಲ್‌ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಇಬ್ಬರು ಮಹಿಳೆಯರನ್ನು ರಕ್ಷಿಸಿ ಹೋಟೆಲ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಬನ್ನೇರುಘಟ್ಟ ಮುಖ್ಯರಸ್ತೆಯ ಕಂಫರ್ಟ್‌ ಹೋಟೆಲ್‌ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಇಬ್ಬರು ಮಹಿಳೆಯರನ್ನು ರಕ್ಷಿಸಿ ಹೋಟೆಲ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಗೌರವ್ ರಾಜ್ ಕರದಮ್, ಹೀನಾ ಸಿಂಗ್ ಸೋಲಂಕಿ ಮತ್ತು ಅಣ್ಣಪ್ಪ ಬಂಧಿತ ಆರೋಪಿಗಳು.

ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೇರುಘಟ್ಟ ಮುಖ್ಯರಸ್ತೆ ಅರಕೆರೆ ಎಂಬಲ್ಲಿರುವ ಕಂಫರ್ಟ್‌ ಹೋಟೆಲ್‌ನಲ್ಲಿ ಕಾನೂನುಬಾಹಿರವಾಗಿ ಹೊರರಾಜ್ಯಗಳಿಂದ ಹುಡುಗಿಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಹೊರ ರಾಜ್ಯದ ಮಹಿಳೆಯರನ್ನು ರಕ್ಷಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ನಾಲ್ವರು ತಪ್ಪಿಸಿಕೊಂಡಿದ್ದಾರೆ.

ಆರೋಪಿ ಗೌರವ್ ರಾಜ್ ಕರದಮ್ ಅಲಿಯಸ್ ಹೆರ್ರಿ ಸಿಂಗ್ ಸೋಲಂಕಿ ಎಂಬಾತನಿಂದ ಒಂದು ಮೊಬೈಲ್ ಫೋನ್, ರೂಪೇ ಪೇಟಿಯಂ ಕಾರ್ಡ್, ವಿವೊ ಕಂಪನಿಯ ಮತ್ತೊಂದು ಮೊಬೈಲ್, ಹೀನಾ ಸಿಂಗ್ ಸೋಲಂಕಿಯಿಂದ ಬೇರೆ ಬೇರೆ ಕಂಪನಿಯ ಮೂರು ಮೊಬೈಲ್ ಪೋನ್‌ಗಳು, ಹೋಟೆಲ್ ಮ್ಯಾನೇಜರ್ ಅಣ್ಣಪ್ಪ ಎಂಬಾತನಿಂದ ಮೊಬೈಲ್ ಫೋನ್, 500 ಮುಖಬೆಲೆಯ ಮೂರು ನೋಟು ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ದಾಳಿಯ ವೇಳೆ ನಾಲ್ವರು ಆರೋಪಿಗಳು ತರೆಮರೆಸಿಕೊಂಡಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗಿದೆ.

ಆರೋಪಿ ಪಿಂಪ್‌ಗಳಾದ ಗೌರವ್ ಕರದಮ್ ಮತ್ತು ಹೀನಾ ಸಿಂಗ್ ಆನ್‌ಲೈನ್‌ನಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಹಾಕಿ ಗಿರಾಕಿಗಳನ್ನು ಕರೆಸಿಕೊಳ್ಳುತ್ತಿದ್ದರು. ಉದ್ಯೋಗ ಕೊಡಿಸುವ ನೆಪದಲ್ಲಿ ಹೊರ ರಾಜ್ಯದಿಂದ ಹುಡುಗಿಯರನ್ನು ಕರೆಸಿಕೊಂಡು ನಗರಾದ್ಯಂತ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಆರೋಪಿಗಳ ಪತ್ತೆಗೆ ಸಿಸಿಬಿ ಪೊಲೀಸರು ಹಲವು ದಿನಗಳಿಂದ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿ, ಆರೋಪಿಗಳ ಕಾಲ್ ರೆಕಾರ್ಡ್‌ ಬಳಸಿ ಕೊನೆಗೂ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿಯ ಮ ಹಿಳಾ ಸಂರಕ್ಷಣಾ ದಳದ ಎಸಿಪಿ ಎಂ.ಆರ್. ಮುದವಿ ನೇತೃತ್ವದಲ್ಲಿ ಅಧಿಕಾರಿಗಳಾದ ತಿಮ್ಮೇಗೌಡ, ಮುಹಮ್ಮದ್ ಸಿರಾಜ್ ಮತ್ತು ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com