ಪ್ರತಿಭಟನೆಗಿಳಿದು 19 ದಿನಗಳಾದರೂ ಇನ್ನೂ ಈಡೇರಲಿಲ್ಲ ಆಶಾ ಕಾರ್ಯಕರ್ತೆಯರ ಬೇಡಿಕೆ!

ಮಾಸಿಕ ರೂ.12 ಸಾವಿರ ಗೌರವ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರು ಜು.29ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾಸಿಕ ರೂ.12 ಸಾವಿರ ಗೌರವ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರು ಜು.29ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. 

ಜು.10ರಿಂದ ಆಶಾ ಕಾರ್ಯಕರ್ತೆಯರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ 19 ದಿನ ಪೂರೈಸಿದೆ. ಕಾರ್ಯಕರ್ತೆಯರಿಗೆ ಮಾಸಿಕ ರೂ.12 ಸಾವಿರ ಗೌರವ ಧನ, ವೈದ್ಯಕೀಯ ಸುರಕ್ಷತಾ ಸಾಮಾಗ್ರಿ ನೀಡಬೇಕು. ಕೋವಿಡ್-19ಗೆ ತುತ್ತಾಗಿರುವ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. 

ಆದರೆ, ಹೋರಾಟಕ್ಕೆ ಸರ್ಕಾರದಿಂದ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಜು.29ರಂದು ಸಿಎಂ ಮನೆಗೆ ಮುತ್ತಿಗೆ ಹಾಕಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com