ಕೋರ್ಟ್ ತೀರ್ಪು ಆಧರಿಸಿ ಸಿಇಟಿ ಪರೀಕ್ಷೆ ನಡೆಸಲಾಗುವುದು: ಉನ್ನತ ಶಿಕ್ಷಣ ಸಚಿವ

ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್'ಗಳ ಪ್ರವೇಶಕ್ಕಾಗಿ ನಡೆಸಲಿರುವ ಸಿಇಟಿ ಪರೀಕ್ಷಾ ಸಿದ್ಧತೆಗಳ ಕುರಿತ ವರದಿಯನ್ನು ರಾಜ್ಯ ಸರ್ಕಾರವು ಬುಧವಾರ ಹೈಕೋರ್ಟ್'ಗೆ ಸಲ್ಲಿಸಿದೆ. ಈ ವರದಿ ಆಧಾರದ ಮೇಲೆ ನ್ಯಾಯಾಲಯ ಪರೀಕ್ಷೆ ನಡೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ನೀಡುವ ತೀರ್ಪಿನಂತೆ ನಡೆದುಕೊಳ್ಳಲು ತೀರ್ಮಾನಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್'ಗಳ ಪ್ರವೇಶಕ್ಕಾಗಿ ನಡೆಸಲಿರುವ ಸಿಇಟಿ ಪರೀಕ್ಷಾ ಸಿದ್ಧತೆಗಳ ಕುರಿತ ವರದಿಯನ್ನು ರಾಜ್ಯ ಸರ್ಕಾರವು ಬುಧವಾರ ಹೈಕೋರ್ಟ್'ಗೆ ಸಲ್ಲಿಸಿದೆ. ಈ ವರದಿ ಆಧಾರದ ಮೇಲೆ ನ್ಯಾಯಾಲಯ ಪರೀಕ್ಷೆ ನಡೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ನೀಡುವ ತೀರ್ಪಿನಂತೆ ನಡೆದುಕೊಳ್ಳಲು ತೀರ್ಮಾನಿಸಿದೆ. 

ರಾಜ್ಯದಲ್ಲಿ ಜು.30,.31, ಹಾಗೂ ಆ.1 ರಂದು ಸಿಇಟಿ ಪರೀಕ್ಷೆ ನಡೆಸುವ ಸಂಬಂಂಧ ಮರು ಪರಿಶೀಲನೆ ನಡೆಸುವಂತೆ ಮಂಗಳವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. 

ಈ ಆಧಾರದಲ್ಲಿ ಮಂಗಳವಾರ ಸಂಜೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶಿಕ್ಷಣ ಿಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಸಾರಿಗೆ, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ವಿಡಿಯೋ ಕಾನ್ಫರೆನ್ಸ್ ನಡೆಸಿದರು. 

ಸಭೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ವ್ಯಕ್ತವಾದ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ, ಬುಧವಾಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಅಡ್ವೋಕೇಟ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com