ಹೋಮ್ ಕ್ವಾರಂಟೈನ್'ನಲ್ಲಿದ್ದವರಿಗೆ ಶೀಘ್ರದಲ್ಲೇ ಹೆಲ್ತ್ ಕಿಟ್!

ಹೋಮ್ ಕ್ವಾರಂಟೈನ್ ನಲ್ಲಿದ್ದವರಿಗೆ ಹೆಲ್ತ್ ಕಿಟ್ ನೀಡಲು ಬಿಬಿಎಂಪಿ ಚಿಂತನೆ ನಡೆಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹೋಮ್ ಕ್ವಾರಂಟೈನ್ ನಲ್ಲಿದ್ದವರಿಗೆ ಹೆಲ್ತ್ ಕಿಟ್ ನೀಡಲು ಬಿಬಿಎಂಪಿ ಚಿಂತನೆ ನಡೆಸಿದೆ. 

ಮಂಗಳವಾರ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಅವರು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾುಕತೆ ನಡೆಸಿದ್ದು, ಹೋಮ್ ಕ್ವಾರಂಟೈನ್ ನಲ್ಲಿದ್ದವರಿಗೆ ವಿಶೇಷ ಆರೋಗ್ಯ ಗಕಿಟ್ ನೀಡಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. 

ಈ ಹೆಲ್ತ್ ಕಿಟ್ ನಲ್ಲಿ ಆಕ್ಲಿಮೀಟರ್, ಥರ್ಮಲ್ ಸ್ಕ್ರೀನಿಂಗ್, ಔಷಧಿಗಳು, ಸೂಚನಾ ಕೈಪಿಡಿ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ನೀಡಲು ನಿರ್ಧರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಸೊಂಕು ತಗುಲಿದ ಕೂಡಲೇ ಪ್ರತೀಯೊಬ್ಬರೂ ಆಸ್ಪತ್ರೆಗೆ ದಾಖಲಾಗಬೇಕಿಲ್ಲ. ಸಣ್ಣಪುಟ್ಟ ಲಕ್ಷಣಗಳಿದ್ದರೆ, ಲಕ್ಷಣರಹಿತವಾಗಿದ್ದವರನ್ನು ಹೋಮ್ ಕ್ವಾರಂಟೈನ್ ಮಾಡಲಾಗುತ್ತಿದೆ. ಇಂತಹವ ಆರೋಗ್ಯವನ್ನು ಪ್ರತೀನಿತ್ಯ ಪರಿಶೀಲನೆ ನಡೆಸಲಾಗುತ್ತದೆ. ಹೀಗಾಗಿ ಹೋಂ ಕ್ವಾರಂಟೈನ್ ನಲ್ಲಿದ್ದವರಿಗೆ ಹೆಲ್ತ್ ಕಿಟ್ ನೀಡಲು ಬಿಬಿಎಂಪಿ ನಿರ್ಧರಿಸಿದ್ದು, ಈ ಹೆಲ್ತ್ ಕಿಟ್'ಗೆ ವೆಚ್ಚಗಳ ಕುರಿತು ಇನ್ನೂ ಯಾವುದೇ ನಿರ್ಧಾರಗಳನ್ನು ಕೈಗೊಂಡಿಲ್ಲ ಎನ್ನಲಾಗುತ್ತಿದೆ. 

ಬೆಂಗಳೂರು ನಗರ ವೊಂದರಲ್ಲಿಯೇ 33,816 ಮಂದಿ ಸೋಂಕಿತರಿದ್ದು, ಇದರಲ್ಲಿ 353 ಮಂದಿ ಐಸಿಯುವಿನಲ್ಲಿದ್ದಾರೆ. 152 ಮಂದಿ ಸರ್ಕಾರಿ ಆಸ್ಪತ್ರೆ, 170 ಸರ್ಕಾರಿ ವೈದ್ಯಕೀಯ ಕಾಲೇಜು, 828 ಖಾಸಗಿ ಆಸ್ಪತ್ರೆಗಳು, 1,412 ಮಂದಿ ಖಾಸಗಿ ವೈದ್ಯಕೀಯ ಕಾಲೇಜು, 2,599 ಮಂದಿ ಬಿಬಿಎಂಪಿ ಕೋವಿಡ್ ಕೇರ್ ಕೇಂದ್ರದಲ್ಲಿ, 492 ಮಂದಿ ಖಾಸಗಿ ಆರೋಗ್ಯ ಕೇಂದ್ರಗಳು, 10,000 ಜನರು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. 

ಕೆಲವೆಡೆ ವೆಂಟಿಲೇಟರ್ ಗಳ ಕೊರತೆ ಎದುರಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ನಿಮ್ಹಾನ್ಸ್ ಹಾಗೂ ಜಯದೇವದಂತಹ ಆಸ್ಪತ್ರೆಗಳು ಹೆಚ್ಚುವರಿಯಾಗಿರುವ ವೆಂಟಿಲೇಟರ್ಗ ಳನ್ನು ನೀಡಲು ಒಪ್ಪಿಗೆ ನೀಡಿವೆ ಎಂದು ಮಂಜುನಾಥ್ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ. 

ಆ್ಯಂಬುಲೆನ್ಸ್: ಶಾಸಕ, ಸದಸ್ಯರ ಮಧ್ಯೆ ಜಟಾಪಟಿ
ನಗರದಲ್ಲಿ ಕೊರೋನಾ ಸೋಂಕಿತರನ್ನು ಕರೆದೊಯ್ಯುವ ಆ್ಯಂಬುಲೆನ್ಸ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ರಮೇಶ್ ಗೌಡ ಹಾಗೂ ಪಾಲಿಕೆ ಸದಸ್ಯ ಪದ್ಮನಾಭ ರೆಡ್ಡಿ ಮಧ್ಯೆ ಮಾತಿನ ಚಕಮಕಿ ನಡೆದು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆಯಿತು. 

ನಿನ್ನೆ ನಡೆದ ಬಿಬಿಎಂಪಿ ಮಾಸಿಕ ಸಭೆಯಲ್ಲಿ ಮಾತನಾಡಿದ ರಮೇಶ್ ಗೌಡ, ನಗರದಲ್ಲಿ ಕೊರೋನಾ ಸೋಂಕಿತರು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ವ್ಯವಸ್ಥೆ ಇಲ್ಲದೇ ಜನರು ಪರದಾಡುತ್ತಿದ್ದಾರೆ ಎಂದರು. ಈ ವೇಳೆ ಪದ್ಮನಾಭ ರೆಡ್ಡಿ, ರಮೇಶ್ ಗೌಡ ನಡುವೆ ವಾಗ್ವಾದ ನಡೆಯಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com