ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಕೋವಿಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ

ಕೋವಿಡ್ ಪರೀಕ್ಷೆಯನ್ನು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ನಡೆಸಲು ಹೆಚ್ಚಿನ ಮಾನವ ಶಕ್ತಿಯ ಅಗತ್ಯವಿದ್ದು ಇದಕ್ಕಾಗಿ ರಾಜ್ಯ ಸರ್ಕಾರ ಅಂತಿಮ ವರ್ಷದ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಲು ತೀರ್ಮಾನಿಸಿದೆ.
ಕೋವಿಡ್ ಪರೀಕ್ಷೆ
ಕೋವಿಡ್ ಪರೀಕ್ಷೆ

ಬೆಂಗಳೂರು: ಕೋವಿಡ್ ಪರೀಕ್ಷೆಯನ್ನು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ನಡೆಸಲು ಹೆಚ್ಚಿನ ಮಾನವ ಶಕ್ತಿಯ ಅಗತ್ಯವಿದ್ದು ಇದಕ್ಕಾಗಿ ರಾಜ್ಯ ಸರ್ಕಾರ ಅಂತಿಮ ವರ್ಷದ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಲು ತೀರ್ಮಾನಿಸಿದೆ, ಕೋವಿಡ್ ಕರ್ತವ್ಯದಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳಿಗೆ ಇಂಟರ್ನೆಲ್‌ಗಳಲ್ಲಿ ಗ್ರೇಸ್ ಮಾರ್ಕ್ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಹೇಳಿದ್ದಾರೆ. 

ಸಚಿವ ಸುಧಾಕರ್ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಮಾವೇಶದಲ್ಲಿ ಮಾತನಾಡಿದರು. ಅಲ್ಲದೆ ಬೆಂಗಳೂರಿನಲ್ಲಿ ಕೋವಿಡ್ ಸಿದ್ಧತೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು. 

ಜುಲೈ 16 ರಂದು ಸ್ನಾತಕೋತ್ತರಪರೀಕ್ಷೆ ತೆಗೆದುಕೊಂಡ 2 ಸಾವಿರ ವಿದ್ಯಾರ್ಥಿಗಳನ್ನು ತಮ್ಮ ಪರೀಕ್ಷೆಯ ನಂತರ ಸೀನಿಯರ್ ರೆಸಿಡೆಂಟ್ ಡಾಕ್ಟರ್ ಗಳನ್ನಾಗಿ  ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು.

ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುವುದು ಮತ್ತು ಚಿಕಿತ್ಸೆಯನ್ನು ನಿರಾಕರಿಸಿದ ಹಲವಾರು ನಿದರ್ಶನಗಳನ್ನು ಗಮನಿಸಿದ ಅವರು, ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲು ಎಲ್ಲಾ ವಲಯಗಳ ಜಂಟಿ ಆಯುಕ್ತರಿಗೆ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಕೆಪಿಎಂಇ ಕಾಯ್ದೆಯಡಿ ಅಧಿಕಾರ ನೀಡಲಾಗುತ್ತದೆ ಎಂದು ಹೇಳಿದರು. "ಅಗತ್ಯವಿದ್ದರೆ ಆಯುಕ್ತರು ಪೊಲೀಸ್ ಇಲಾಖೆಯಿಂದ ಸಹಾಯ ಪಡೆಯಬಹುದು" ಎಂದು ಅವರು ಹೇಳಿದರು. ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಸಹಕರಿಸದ ಖಾಸಗಿ ಆಸ್ಪತ್ರೆಗಳು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದರು

ವೀಡಿಯೊ ಸಮಾವೇಶದಲ್ಲಿ ಬೂತ್-ಮಟ್ಟದ ಕಾರ್ಯಪಡೆ ಸಮಿತಿಗಳಂತಹ ಇತರ ವಿಚಾರಗಳ ಚರ್ಚೆ ನಡೆದಿದೆ. ಇವುಗಳನ್ನು ಎರಡು ಮೂರು ದಿನಗಳಲ್ಲಿ ಅಂತಿಮಗೊಳಿಸುವ ನಿರೀಕ್ಷೆಯಿದೆ. ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ಮತ್ತು ಪರೀಕ್ಷಾ ಗುರಿಗಳನ್ನು ಸಾಧಿಸುವುದನ್ನು ವಲಯ ಉಸ್ತುವಾರಿ ಅಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಾರೆ ಮತ್ತು ದೈನಂದಿನ ವರದಿಗಳನ್ನು ಉಸ್ತುವಾರಿ ಅಧಿಕಾರಿಗೆ ಸಲ್ಲಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com