ಕರ್ತವ್ಯ ಮುಗಿಸಿ ಮನೆಗೆ ತೆರಳುವ ವೇಳೆ ಆಶಾ ಕಾರ್ಯಕರ್ತೆ ಮೇಲೆ ಲೈಂಗಿಕ ದೌರ್ಜನ್ಯ!

ಕೊರೋನಾ ಕರ್ತವ್ಯ ಪೂರ್ಣಗೊಳಿಸಿ ಮನೆಗೆ ತೆರಳುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. 
ಆಶಾ ಕಾರ್ಯಕರ್ತೆಯರು
ಆಶಾ ಕಾರ್ಯಕರ್ತೆಯರು

ಚಿಕ್ಕಮಗಳೂರು: ಕೊರೋನಾ ಕರ್ತವ್ಯ ಪೂರ್ಣಗೊಳಿಸಿ ಮನೆಗೆ ತೆರಳುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. 

ಘಟನೆ ಕುರಿತು ಆಶಾ ಕಾರ್ಯಕರ್ತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 

ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕೆಲ ಯುವಕರು ದಾರಿ ತಡೆದರು. ಬಳಿಕ ನನ್ನ ಮೇಲೆ ದೌರ್ಜನ್ಯ ಎಸಗಿದರು. ಬಲವಂತವಾಗಿ ನನ್ನನ್ನು ಎಳೆದುಕೊಂಡರು, ಹೇಗೋ ನಾನು ಅಲ್ಲಿಂದ ತಪ್ಪಿಸಿಕೊಂಡು ಮನೆ ತಲುಪಿದೆ. ಘಟನೆ ನಡೆದ ಸಂದರ್ಭದಲ್ಲಿ ನನ್ನ ಪತಿ ಊರಿನಲ್ಲಿ ಇರಲಿಲ್ಲ. ಪತಿ ಮನೆಗೆ ಬರುತ್ತಿದ್ದಂತೆಯೇ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಹೇಳಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com