ಬೆಚ್ಚಿ ಬಿದ್ದ ಕರುನಾಡು: ಇಂದು ದಾಖಲೆ 388 ಕೊರೋನಾ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆ!

ಬೆಂಗಳೂರು: ಮಹಾರಾಷ್ಟ್ರ ನಂಜಿಗೆ ಉಡುಪಿ ಮತ್ತು ಕಲಬುರಗಿ ತತ್ತರಿಸಿದ್ದು ಇಂದು ಒಂದೇ ದಿನ ಬರೋಬ್ಬರಿ 250 ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಇಂದು ದಾಖಲೆ 388 ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿ ಇಂದು ಪತ್ತೆಯಾಗಿರುವ 388 ಪ್ರಕರಣಗಳ ಪೈಕಿ 363 ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಿಂದಲೇ ಪತ್ತೆಯಾಗಿದೆ. ಉಡುಪಿಯಲ್ಲಿ 150 ಪ್ರಕರಣ ಮತ್ತು ಕಲಬುರಗಿಯಲ್ಲಿ 100 ಪತ್ತೆಯಾಗಿದ್ದು ಮಹಾ ನಂಜಿಗೆ ಅಕ್ಷರಶಃ ತತ್ತರಿಸಿ ಹೋಗಿವೆ.
ಉಡುಪಿ 150, ಕಲಬುರಗಿ 100, ಬೆಳಗಾವಿ 51, ರಾಯಚೂರು 16, ಬೆಂಗಳೂರು ನಗರ 12, ಬೀದರ್ 10, ಬಾಗಲಕೋಟೆ ಹಾಸನ 9, ದಾವಣಗೆರೆ 7, ಯಾದಗಿರಿ 5, ಮಂಡ್ಯ, ವಿಜಯಪುರದಲ್ಲಿ ತಲಾ 4, ಬೆಂಗಳೂರು ಗ್ರಾಮಾಂತರ 3, ಚಿಕ್ಕಬಳ್ಳಾಪುರ, ಧಾರವಾಡ, ಚಿಕ್ಕಮಗಳೂರಿನಲ್ಲಿ ತಲಾ 2, ಕೋಲಾರ, ಹಾವೇರಿಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿವೆ.
3,796 ಪ್ರಕರಣಗಳ ಪೈಕಿ 1403 ಮಂದಿ ಗುಣಮುಖರಾಗಿದ್ದಾರೆ. ಇನ್ನು 2339 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟಾರೆ 52 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


