
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆಯು ಬುಧವಾರದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 23 ವಾಯುವಜ್ರ (AC Volvo) ಹವಾನಿಯಂತ್ರಿತ ಸಾರಿಗೆ ವಾಹನಗಳ ಕಾರ್ಯಾಚರಣೆಯನ್ನು 5 ಮಾರ್ಗಗಳಲ್ಲಿ ಆರಂಭಿಸಲಿದೆ.
ಮೈಸೂರು ಸ್ಯಾಟಲೈಟ್ ಬಸ್ಸ್ ನಿಲ್ದಾಣ ದಿಂದ ಕೆಂಪೇಗೌಡ ವಿಮಾನ ನಿಲ್ದಾಣ, ಕೆಂಪೇಗೌಡ ಬಸ್ ನಿಲ್ದಾಣದಿಂದ ಕೆಂಪೇಗೌಡ ವಿಮಾನ ನಿಲ್ದಾಣ, ಬನಶಂಕರಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ಬಿಟಿಎಂ ಲೇಔಟ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಾಯುವಜ್ರ ಬಸ್ ಸಂಚಾರ ಸೇವೆಯಿರುತ್ತದೆ.
ಸಾರ್ವಜನಿಕರು ಈ ಬಸ್ ಸಂಚಾರ ಸೇವೆಯನ್ನು ಬಳಸಿಕೊಳ್ಳುವಂತೆ ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
Advertisement