
ಬೆಂಗಳೂರು: ಮುಂಬೈನಿಂದ ಉದ್ಯಾನ್ ಎಕ್ಸ್'ಪ್ರೆಸ್ ನಿಂದ ನಗರಕ್ಕೆ ಆಗಮಿಸಿದ್ದ ಇಬ್ಬರು ವ್ಯಕ್ತಿಗಳು ಸಾಂಸ್ಥಿಕ ಕ್ವಾರಂಟೈನ್ ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿ, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿ ಮಾಡಿದ್ದ ಘಟನೆ ಮಂಗಳವಾರ ನಡೆದಿದೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಟ್ ಟರ್ಮಿನಲ್ ನಿಂದ ಹೊರಡಿದ್ದ ಉದ್ಯಾನ್ ಎಕ್ಸ್'ಪ್ರೆನ್ ನಿನ್ನೆ ಬೆಳಿಗ್ಗೆ 8.33ರ ಸುಮಾರಿಗೆ ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ರೈಲಿನಲ್ಲಿ 52 ಮಕ್ಕಳೂ ಸೇರಿದಂತೆ ಒಟ್ಟು 644 ಮಂದಿ ಪ್ರಯಾಣಿಕರಿದ್ದರು. ಆದರೆ, ಇದರಲ್ಲಿ 28 ಮಕ್ಕಳು ಸೇರಿ ಕೇವಲ 556 ಮಂದಿ ಮಾತ್ರ ರೈಲಿನಿಂದ ಇಳಿದಿದ್ದರು. ಇದರಿಂದಾಗಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ರೈಲಿನಲ್ಲಿ ಎಷ್ಟು ಮಂದಿ ಪ್ರಯಾಣಿಸಿದ್ದರು, ಎಷ್ಟು ಮಂದಿ ಬಂದಿಳಿದಿದ್ದಾರೆಂಬುದರ ಕುರಿತು ಅಧಿಕಾರಿಗಳಿಗೂ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಈ ಪೈಕಿ ತಪ್ಪಿಸಿಕೊಂಡಿಗ್ಗ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿ, ಕ್ವಾರಂಟೈನ್ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಸೋಂಕಿ ಪೀಡಿತರ ಸಂಖ್ಯೆ ಹೆಚ್ಚಾಗಿದ್ದು, ಆ ರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಕಡ್ಡಾಯವಾಗಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಬೇಕೆಂದು ಸರ್ಕಾರ ಈ ಹಿಂದೆ ಆದೇಶಿಸಿತ್ತು.
ಇದರಂತೆ ರೈಲ್ವೇ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಿ ಕ್ವಾರಂಟೈನ್ ನಲ್ಲಿರಿಸುವ ಕಾರ್ಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಬಿಝಿಯಾಗಿದ್ದಾರೆ.
Advertisement