ಹೊಸಪೇಟೆ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಗಾಳೆಮ್ಮನಗುಡಿ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ನಡೆದ ಸ್ಥಳ
ಅಪಘಾತ ನಡೆದ ಸ್ಥಳ
Updated on: 

ಹೊಸಪೇಟೆ: ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಗಾಳೆಮ್ಮನಗುಡಿ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಬೈಕ್ ಸವಾರ ಹಗರಿಬೊಮ್ಮನಹಳ್ಳಿ ಪಟ್ಟಣದ 22 ವರ್ಷದ ಜಮಾಲ್ ಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದ ಕಾರಿಗೆ ಏಕ ಮುಖ ರಸ್ತೆಯಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಮರಿಯಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com