ರಾಜ್ಯ

ಕರ್ನಾಟಕಕ್ಕೆ 'ಮಹಾ'ಮಾರಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿ

ಕರ್ನಾಟಕಕ್ಕೆ 'ಮಹಾ'ಮಾರಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿ
ವಲಸೆ ಕಾರ್ಮಿಕರು
Published On :

ಬೆಂಗಳೂರು: ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಎಚ್ಚೇತ ರಾಜ್ಯ ಸರ್ಕಾರ ಇದೀಗ ಅಲ್ಲಿಂದ ಬರುವವರಿಗಾಗಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. 

ಮಹಾರಾಷ್ಟ್ರ ಬಿಟ್ಟು ಬೇರೆ ರಾಜ್ಯಗಳಿಂದ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರುವ ಅವಶ್ಯಕತೆ ಇಲ್ಲ. ಬದಲಿಗೆ 14 ದಿನಗಳ ಹೋಂ ಕ್ವಾರಂಟೈನ್ ಮಾಡಲು ಸೂಚನೆ ನೀಡಲಾಗಿದೆ. ಆದರೆ ಮಹಾರಾಷ್ಟ್ರದಿಂದ ಬರುವವರು ಕಡ್ಡಾಯವಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್ ಮತ್ತು 14 ದಿನ ಹೋಂ ಕ್ವಾರಂಟೈನ್ ನಲ್ಲಿ ಇರಬೇಕು.

ಹೊರ ರಾಜ್ಯಗಳಿಂದ ಬರುವವರಿಗೆ ರಾಜ್ಯದ ಚೆಕ್ ಪೋಸ್ಟ್ ನಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ. ಜ್ವರದ ಯಾವುದೇ ಲಕ್ಷಣಗಳು ಇಲ್ಲವಾದಲ್ಲಿ ಕೈಗೆ ಹೋ ಕ್ವಾರಂಟೈನ್ ಸೀಲ್ ಹಾಕಿ ಮನೆಗೆ ಕಳಿಸಲಾಗುತ್ತದೆ. ಲಕ್ಷಣಗಳು ಇದ್ದರೆ ಕೋವಿಡ್ 19 ಪರೀಕ್ಷೆಗಾಗಿ ಆಸ್ಪತ್ರೆಗೆ ಹೋಗಬೇಕು. 

ಇನ್ನು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಸಾಕಷ್ಟು ಮಂದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಪೈಕಿ ಅತೀ ಹೆಚ್ಚು ಸೋಂಕುಗಳು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.