ವಲಸೆ ಕಾರ್ಮಿಕರ ವಿಚಾರ: ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರ ನಡೆದುಕೊಳ್ಳಲಿ: ಸಿದ್ದರಾಮಯ್ಯ

ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನ್ಯಾಯಾಲಯದ ಆದೇಶದಂತೆ ಸರ್ಕಾರಗಳು ಆದಷ್ಟು ಬೇಗ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನ್ಯಾಯಾಲಯದ ಆದೇಶದಂತೆ ಸರ್ಕಾರಗಳು ಆದಷ್ಟು ಬೇಗ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳುಹಿಸಿಕೊಡಬೇಕು. ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ತಕ್ಷಣ ಜಾರಿಗೆ ತರಲು ಮುಂದಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಸರ್ಕಾರ ಈಗಲಾದರೂ  ಎಚ್ಚೆತ್ತುಕೊಂಡು ಮಾನವೀಯ ದೃಷ್ಟಿಯಿಂದ ವಲಸೆ ಕಾರ್ಮಿಕರಿಗೆ ನೆರವಾಗಬೇಕು. ವಲಸೆ ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com