ಬಾಲಗಂಗಾಧರನಾಥ ಸ್ವಾಮೀಜಿ- ಶಿವಕುಮಾರ ಸ್ವಾಮೀಜಿ ಹುಟ್ಟೂರು ಅಭಿವೃದ್ಧಿಗೆ ಸಿಎಂ ಸೂಚನೆ

ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ   ಅವರು ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿಗಳು ಸಿದ್ಧವಾಗಿವೆ. ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಪ್ರವಾಸೋದ್ಯಮ ವಲಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದ್ದು, 3 ಲಕ್ಷ ಉದ್ಯೋಗ ಅಪಾಯದ ಅಂಚಿನಲ್ಲಿದೆ. ಕೆ.ಎಸ್.ಟಿ.ಡಿ.ಸಿ. ಸಂಸ್ಥೆ ಹಾಗೂ ಜಂಗಲ್ ಲಾಡ್ಜಸ್ ಸಂಸ್ಥೆಗೆ ಕ್ರಮವಾಗಿ 14 ಕೋಟಿ ರೂ. ಹಾಗೂ 15 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com