ದೇಶದ್ರೋಹ ಪ್ರಕರಣ: ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ ಜೈಲಿನಿಂದ ಬಿಡುಗಡೆ

ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿ ದೇಶದ್ರೋಹದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾ ನರೋನಾ ಪರಪ್ಪನ ಅಗ್ರಹಾರ ಜೈಲಿನಿಂದ ಶುಕ್ರವಾರ ಬಿಡುಗಡೆಯಾಗಿದ್ದಾರೆ.
ಅಮೂಲ್ಯಾ ಲಿಯೋನಾ
ಅಮೂಲ್ಯಾ ಲಿಯೋನಾ
Updated on: 

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿ ದೇಶದ್ರೋಹದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾ ನರೋನಾ ಪರಪ್ಪನ ಅಗ್ರಹಾರ ಜೈಲಿನಿಂದ ಶುಕ್ರವಾರ ಬಿಡುಗಡೆಯಾಗಿದ್ದಾರೆ.

ಫೆಬ್ರವರಿ 21ರಂದು ಬೆಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರೋಧಿಸಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಂಸದ ಅಸಾದುದ್ದಿನ್ ಓವೈಸಿ ಭಾಗಿಯಾಗಿದ್ದ ಈ ಸಮಾವೇಶದಲ್ಲಿ ಅಮೂಲ್ಯ ಲಿಯೋನಾ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದರು.

ಈ ಕುರಿತಂತೆ ಮೇ 26, ಮೇ 29ರಂದು ಇಮೇಲ್ ಕಳಿಸಿದ್ದರು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಇದೆಲ್ಲ ಫಲ ನೀಡದಿದ್ದಾಗ ಜೂನ್ 2 ರಂದು ಅರ್ಜಿ ಸಲ್ಲಿಸಿದ್ದಾರೆ. ಇದಾದ ಬಳಿಕ ಜೂನ್ 3 ರಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ವಕೀಲ ಪ್ರಸನ್ನ ತಿಳಿಸಿದರು. ಹೀಗಾಗಿ, ಕಾನೂನಿಗೆ ಬದ್ಧವಾಗಿ ಸಿಆರ್ ಪಿ ಸಿ ಸೆಕ್ಷನ್ 162 ಕಲಂ 2 ಅಡಿಯಲ್ಲಿ ಷರತ್ತುಬದ್ಧ ಜಾಮೀನು ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com