ಮೊಬೈಲ್ ಕರೆ: ಹಲೋ ಬದಲು ಜೈ ಕಿಸಾನ್ ಬಳಕೆಯಾಗಲಿ- ಬಿಸಿ ಪಾಟೀಲ್

ಕೃಷಿಕರು, ಕೃಷಿ ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ವಿಜ್ಞಾನಿಗಳು ಇನ್ನು ಮುಂದೆ ದೂರವಾಣಿ, ಮೊಬೈಲ್ ಕರೆಯನ್ನು ಸ್ವೀಕರಿಸಿದ ತಕ್ಷಣ ಬರುವ ಮೊದಲ ಪದ ಹಲೋ ಬದಲು ಜೈ ಕಿಸಾನ್ ಆಗಬೇಕು. ಸಾಮಾಜಿಕ ಆಂದೋಲನವಾಗಿ ಅನ್ನದಾತನ ಶಕ್ತಿ ಜಗತ್ತಿಗೆ ತಿಳಿಯಬೇಕು ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಆಶಯ ವ್ಯಕ್ತಪಡಿಸಿದ್ದಾರೆ.
ಬಿಸಿ ಪಾಟೀಲ್
ಬಿಸಿ ಪಾಟೀಲ್
Updated on

ಬೆಂಗಳೂರು: ಕೃಷಿಕರು, ಕೃಷಿ ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ವಿಜ್ಞಾನಿಗಳು ಇನ್ನು ಮುಂದೆ ದೂರವಾಣಿ, ಮೊಬೈಲ್ ಕರೆಯನ್ನು ಸ್ವೀಕರಿಸಿದ ತಕ್ಷಣ ಬರುವ ಮೊದಲ ಪದ ಹಲೋ ಬದಲು ಜೈ ಕಿಸಾನ್ ಆಗಬೇಕು. ಸಾಮಾಜಿಕ ಆಂದೋಲನವಾಗಿ ಅನ್ನದಾತನ ಶಕ್ತಿ ಜಗತ್ತಿಗೆ ತಿಳಿಯಬೇಕು ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಆಶಯ ವ್ಯಕ್ತಪಡಿಸಿದ್ದಾರೆ.

ಜಿಕೆವಿಕೆಯಲ್ಲಿ ಮಾತನಾಡಿದ ಕೃಷಿ ಸಚಿವರು, ಕೃಷಿ ಇಲಾಖೆ ಮತ್ತು ಕೃಷಿ ವಿಶ್ವವಿದ್ಯಾನಿಲಯಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಅಧಿಕಾರಿಗಳು ಮತ್ತು ವಿಜ್ಞಾನಿಗಳು ಕೃಷಿಕರಿಗೆ ಹತ್ತಿರವಾಗಿ ನೂತನ ತಂತ್ರಜ್ಞಾನಗಳನ್ನು ರೈತರು ಅನುಸರಿಸಿ ಶ್ರಮ ಕಡಿತಗೊಳಿಸಿ ಹೆಚ್ಚಿನ ಇಳುವರಿ ಪಡೆಯಲು ಪ್ರೇರೇಪಿಸಬೇಕು. ರೈತರು ಒಂದೇ ಬೆಳೆಯನ್ನು ಬೆಳೆಯುವ ಬದಲು ಬಹು ಬೆಳೆಗಳನ್ನು ಬೆಳೆದು ಲಾಭಗಳಿಸಲು ಮುಂದಾಗಬೇಕು. ರೈತರಿಗೆ ಗುರುತಿನ ಚೀಟಿ ನೀಡುವ ಮಹತ್ತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗುರುತಿನ ಚೀಟಿ ಹೊಂದಿದ ರೈತ ನಾನು ಭಾರತದ ಸ್ವಾಭಿಮಾನಿ ರೈತ ಎಂದು ಹೆಮ್ಮೆಯಿಂದ ಎದೆಯೆತ್ತಿ ಹೇಳಿಕೊಳ್ಳಬಹುದು ಎಂದರು.

ಖಾಸಗಿ ಕಂಪನಿಯವರು ತಮ್ಮ ನೂತನ ತಳಿಗಳು ಮತ್ತು ತಂತ್ರಜ್ಞಾನಗಳಿಗೆ ವ್ಯಾಪಕ ಪ್ರಚಾರ ನೀಡುವಂತೆ ಕೃಷಿ ವಿಶ್ವವಿದ್ಯಾನಿಲಯದ ವಿಜ್ಞಾನಿಗಳೂ ಸಹ ವ್ಯಾಪಕ ಪ್ರಚಾರ ನೀಡಿ ತಂತ್ರಜ್ಞಾನಗಳು ಶೀಘ್ರವಾಗಿ ರೈತರ ಮನೆಬಾಗಿಲಿಗೆ ತಲುಪಿಸಲು ಶ್ರಮವಹಿಸಬೇಕು. ಯಾವುದೇ ಇಲಾಖೆಯಾದರೂ, ಪ್ರಪಂಚ ಯಾವುದೇ ರಂಗದಲ್ಲಾದರೂ ಅಭಿವೃದ್ಧಿಹೊಂದಿದರೂ ಜಗತ್ತಿಗೆ ಅನ್ನ ನೀಡುವ ರೈತನ ಮುಂದೆ ತಲೆಬಾಗಬೇಕು. ಅನ್ನವಿಲ್ಲದೆ ಬದುಕುವುದು ಅಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com