
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರನ್ನು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕಿಯೋನಿಕ್ಸ್) ನ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಆದೇಶ ಹೊರಬಿದ್ದಿದೆ.
ಸ್ಥಳೀಯ ಕಾಂಗ್ರೆಸ್ ಮುಖಂಡರು ತೀವ್ರರೀತಿಯಲ್ಲಿ ವರ್ತಿಸುತ್ತಿದ್ದಾರೆಂದು ಆರೋಪಿಸಿ ಬಿಲ್ಲವ ಸಮುದಾಯದ ಪ್ರಭಾವಿ ನಾಯಕ ಹರಿಕೃಷ್ಣ ಬಂಟ್ವಾಳ್ ನವೆಂಬರ್ 2017ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.
ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕಾರ್ಯನಿರ್ವಾಹಕ ಸದಸ್ಯರಾಗಿ, ವಕ್ತಾರರಾಗಿ ಸೇವೆ ಸಲ್ಲಿಸುತ್ತಿರುವ ಹರಿಕೃಷ್ನ ಬಂಟ್ವಾಳ್ ಮುಲ್ಕಿಯ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ವಕ್ತಾರರಾಗಿದ್ದಾರೆ. ಇದೀಗ ಇವರನ್ನು ಕಿಯೋನಿಕ್ಸ್ ಅಧ್ಯಕ್ಷ ಆಗಿ ನೇಮಿಸಲಾಗಿದೆ
ಕಿಯೋನಿಕ್ಸ್ ರಾಜ್ಯ ಸರ್ಕಾರವು ನಡೆಸುವ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಸರ್ಕಾರಿ ಇಲಾಖೆಗೆ ಐಟಿ ಮತ್ತು ಮಾನವ ಸಂಪನ್ಮೂಲ ಪೂರೈಕೆಯನ್ನು ಮಾಡುತ್ತಿದೆ.
ಏತನ್ಮಧ್ಯೆ, ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಸದಸ್ಯರನ್ನು ನೇಮಕ ಮಾಡಿ ಆದೇಶಿಸಿದೆ.
Advertisement