ವಿಧಾನಪರಿಷತ್ ಚುನಾವಣೆ ಪೂರ್ಣಗೊಂಡ ಬಳಿಕ ಡಿಕೆಶಿ ಪದಗ್ರಹಣ

3 ಬಾರಿ ಮುಂದೂಡಿಕೆಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಜುಲೈ 29 ರಂದ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಡಿಕೆ. ಶಿವಕುಮಾರ್
ಡಿಕೆ. ಶಿವಕುಮಾರ್
Updated on: 

ಬೆಂಗಳೂರು: 3 ಬಾರಿ ಮುಂದೂಡಿಕೆಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಜುಲೈ 29 ರಂದ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ ಪೂರ್ಣಗೊಂಡ ಬಳಿಕ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಹೈಕಮಾಂಡ್ ಮಾ.11ರಂದು ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಘೋಷಿಸಿತ್ತು. ಆದರೆ, ಕೊರೋನಾ ಸೋಂಕು ಹಾಗೂ ಲಾಕ್'ಡೌನ್ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಬಳಿಕ ಮೇ.31ಕ್ಕೆ ನಡೆಸಲು ಸಿದ್ಧತೆ ಆರಂಭಿಸಲಾಗಿತ್ತು. ಆದರೆ, ಭಾನುವಾರದಂದು ಸಂಪೂರ್ಣ ಕರ್ಫ್ಯೂ ಘೋಷಿಸಿಜ ಪರಿಣಾಮ ಕಾರ್ಯಕ್ರಮ ಜೂ.7ಕ್ಕೆ ಮುಂದೂಡಲ್ಪಟ್ಟಿತ್ತು. ಜೂ.7ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದ ದಿನಾಂಕವನ್ನು ಮತ್ತೆ ಜೂ.14ಕ್ಕೆ ಮುಂದೂಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com