
ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಿಂದ ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿ ಹೆಸರು ಬದಲಾಗಲಿದೆ. ಬೆಂಗಳೂರು ಸಿಟಿ ಯೂನಿವರ್ಸಿಟಿ ಎಂಬ ಹೊಸ ನಾಮ ಸಿಗಲಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಹೆಸರಿನಲ್ಲಿ 'ಸೆಂಟ್ರಲ್' ಪದ ಬಳಕೆಯ ಬಗ್ಗೆ ಆಕ್ಷೇಪವಿದ್ದ ಹಿನ್ನೆಲೆಯಲ್ಲಿ, ಇದು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ವಿಶ್ವವಿದ್ಯಾಲಯವಾಗಿರುವುದರಿಂದ ಸೆಂಟ್ರಲ್ ಪದವನ್ನು ತೆಗೆದುಹಾಕಬೇಕೆಂದು ಅಧಿಕಾರಿಗಳು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಹೆಸರು ಬದಲಾಗುತ್ತಿದೆ. ಇತ್ತೀಚಿಗೆ ಸಚಿವ ಸಂಪುಟ ಸಭೆಯಲ್ಲಿ ಹೆಸರು ಬದಲಾವಣೆ ಬಗ್ಗೆ ತೀರ್ಮಾನಿಸಲಾಯಿತು.
ಉನ್ನತ ಶಿಕ್ಷಣ ಸಂಸ್ಥೆಗಳ ಆಯುಕ್ತ ಪ್ರದೀಪ್ ಪಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿ, ಬೆಂಗಳೂರು ವಿಶ್ವವಿದ್ಯಾಲಯ ಬೆಂಗಳೂರು, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಎಂದು ಮೂರು ಭಾಗಗಳಾಗಿ ವಿಂಗಡಣೆಯಾದಾಗ ಬೆಂಗಳೂರು ನಗರದ ಕೇಂದ್ರ ಭಾಗದಲ್ಲಿ ಇದು ಇರುವುದರಿಂದ ಇದನ್ನು ನಗರದ ವಿಶ್ವವಿದ್ಯಾಲಯವಾಗಿ ಅಭಿವೃದ್ಧಿಪಡಿಸಬೇಕು ಎಂಬುದು ಉದ್ದೇಶವಾಗಿತ್ತು. ಈ ವಿಶ್ವವಿದ್ಯಾಲಯಕ್ಕೆ ಸೇರಿದ ಬಹುತೇಕ ಕಾಲೇಜುಗಳು ಸಹ ನಗರ ವ್ಯಾಪ್ತಿಯೊಳಗೆ ಬರುತ್ತದೆ. ಬೇರೆ ನಗರಗಳಲ್ಲಿ ನಗರ ವಿಶ್ವವಿದ್ಯಾಲಯಗಳು ನಗರ ವ್ಯಾಪ್ತಿ.ಯೊಳಗೆ ಬರುತ್ತದೆ. ಹೀಗಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಕರೆದರೆ ಅದಕ್ಕೆ ವಿಶೇಷ ಗುರುತು ಸಿಗುತ್ತದೆ ಎಂದು ಸಂಪುಟ ತೀರ್ಮಾನಿಸಿದೆ ಎಂದು ಹೇಳಿದರು.
ಸಂಪುಟ ತೀರ್ಮಾನದ ಬಳಿಕ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗುತ್ತದೆ. ನಂತರ ಅದು ಪ್ರಕಟಣೆಯಾಗಿ ಜಾರಿಗೆ ಬರುತ್ತದೆ, ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಪುನಶ್ಚೇತನ ಮತ್ತು ಅಭಿವೃದ್ಧಿಗೆ 150 ಕೋಟಿ ರೂಪಾಯಿಗಳ ಯೋಜನೆಗೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಅನುಮತಿ ನೀಡುವ ಪ್ರಕ್ರಿಯೆಯಲ್ಲಿದೆ.
Advertisement