ಕೊರೋನಾ ಎಫೆಕ್ಟ್: ಕಂಟೈನ್ಮೆಂಟ್ ಝೋನ್ ಗಳಲ್ಲಿರುವ ಮಾಲ್'ಗಳು ತೆರೆಯಲು ಅವಕಾಶವಿಲ್ಲ- ಬಿಬಿಎಂಪಿ

ಕಂಟೈನ್ಮೆಂಟ್ ಝೋನ್ ಗಳಲ್ಲಿರುವ ಶಾಪಿಂಗ್ ಮಾಲ್ ಗಳು ತೆರೆಯಲು ಅವಕಾಶವಿಲ್ಲ ಎಂದು ಬಿಬಿಎಂಪಿ ಭಾನುವಾರ ಸ್ಪಷ್ಟಪಡಿಸಿದೆ.  
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಂಟೈನ್ಮೆಂಟ್ ಝೋನ್ ಗಳಲ್ಲಿರುವ ಶಾಪಿಂಗ್ ಮಾಲ್ ಗಳು ತೆರೆಯಲು ಅವಕಾಶವಿಲ್ಲ ಎಂದು ಬಿಬಿಎಂಪಿ ಭಾನುವಾರ ಸ್ಪಷ್ಟಪಡಿಸಿದೆ. 

ಅಗತ್ಯ ಸೇವೆಗಳು ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತುಪಡಿಸಿ, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೀಕರು, ಅನಾರೋಗ್ಯ ಪೀಡಿತರು, ಗರ್ಭಿಣಿಯರು ಮನೆಯಲ್ಲಿಯೇ ಇರುವಂತೆ ಸಲಹೆ ನೀಡಿದೆ. ಸಲಹೆಗಳನ್ನು ಮೀರಿ ಮಾಲ್ ಗಳಿಗೆ ಬರುವ ಇಂತಹವರಿಗೆ ಅವಕಾಶ ನೀಡುವುದು, ಬಿಡುವುದು ಆಯಾ ಮಾಲ್ ಗಳಿಗೆ ಬಿಟ್ಟ ವಿಚಾರ ಎಂದು ತಿಳಿಸಿದೆ. 

ಲಾಕ್'ಡೌನ್ ಸಡಿಲಗೊಂಡ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ದೇಗುಲ, ಹೋಟೆಲ್ ಮಾಲ್ ಗಳು ಸೇರಿದಂತೆ ಇನ್ನಿತರೆ ಪ್ರವಾಸಿ ವಲಯಗಳ ಪುನರಾರಂಭಕ್ಕೆ ಅವಕಾಶ ನೀಡಿತ್ತು. ಇದಕ್ಕಾಗಿ ಹಲವು ಮಾರ್ಗಸೂಚಿಗಳನ್ನೂ ಕೂಡ ಬಿಡುಗಡೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com