ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ: ಫೀಲ್ಡ್ ಆಸ್ಪತ್ರೆಗಳನ್ನು ಗುರುತಿಸಲು ಚಿಂತನೆ : ಸಚಿವ ಶ್ರೀರಾಮುಲು

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಫೀಲ್ಡ್ ಆಸ್ಪತ್ರೆಗಳನ್ನು ಗುರುತಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ- ಆಗಸ್ಟ್‌ನಲ್ಲಿ ಕೊರೋನಾ ಪ್ರಕರಣ ಮತ್ತಷ್ಟುಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೋನಾ ನಿಯಂತ್ರಣಕ್ಕೆ ಶ್ರಮಿಸಲಾಗುತ್ತಿದೆ. ಅಗತ್ಯ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರೂ ಯಾವುದೇ ಆತಂಕಪಡಿಸಬೇಕಿಲ್ಲ. ಕೊರೋನಾ ವೈರಸ್ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಹೇಳಿದರು.
ಅಂತೆಯೇ ಬೆಂಗಳೂರಿನಲ್ಲಿ ಕೊರೋನಾ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದು, ಆತಂಕ ತಂದಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸುತ್ತೇನೆ. ಸಾವಿನ ಸಂಖ್ಯೆ ನಿಯಂತ್ರಣ ಸಂಬಂಧ ಚರ್ಚೆ ನಡೆಸಲಾಗುತ್ತಿದ್ದು, ಜೊತೆಗೆ ಸಾಂಕ್ರಾಮಿಕ ಕಾಯಿಲೆಗಳೂ ಸಾವಿಗೆ ಕಾರಣವಾಗುತ್ತಿವೆ. ಹಾಗಾಗಿ ಇವುಗಳ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಿದ್ದೇವೆ ಎಂದರು.
ಇದೇ ವೇಳೆ ಶಾಸಕ ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಸಮಾರಂಭದಲ್ಲಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘನೆಯಾಗಿದ್ದು, ಈ ಕುರಿತು ದೂರು ದಾಖಲಾಗಿದೆ. ಇನ್ನು ಮುಂದೆ ಹೀಗಾಗದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಕ್ರಮ ಕೈಗೊಳ್ಳಲಿದ್ದೇವೆ ಎಂದು ಶ್ರೀರಾಮುಲು ಹೇಳಿದರು. ಪರಮೇಶ್ವರ ನಾಯ್ಕ್ ನನ್ನನ್ನು ಮದುವೆಗೆ ಆಹ್ವಾನಿಸಿದ್ದರು. ನಾನು ಹೋಗಿದ್ದಾಗ ಜಾಸ್ತಿ ಜನ ಸೇರಿರಲಿಲ್ಲ. ನಂತರ ಹೆಚ್ಚಿನ ಜನರು ಜಮಾಯಿಸಿರಬಹುದು. ಮದುವೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರಲಿಲ್ಲ. ಮದುವೆಯಲ್ಲಿ ನಿಯಮಾವಳಿ ಉಲ್ಲಂಘನೆ ಮಾಡಿದ್ದಾರೆ ಎಂದರು.
ಮತ್ತೆ ಲಾಕ್‌ಡೌನ್ ಸಾಧ್ಯವಿಲ್ಲ
ಕೊರೋನಾ ನಿಯಂತ್ರಿಸಲು ಮತ್ತೊಮ್ಮೆ ಲಾಕ್‌ಡೌನ್ ಸಾಧ್ಯವಿಲ್ಲ. ಈ ಮಹಾಮಾರಿಗೆ ವ್ಯಾಕ್ಸಿನ್ ಕಂಡುಹಿಡಿಯುವವರೆಗೂ ಸಾರ್ವಜನಿಕರೂ ಮುಂಜಾಗ್ರತೆ ಕ್ರಮ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವೈರಸ್ ನಿಯಂತ್ರಿಸಲು ಸಹಕರಿಸಬೇಕು. ಲಾಕ್ ಡೌನ್‌ನಿಂದ ಆರ್ಥಿಕ ಹಿಂಜರಿತ ಉಂಟಾಗಿದೆ. ಮತ್ತೊಮ್ಮೆ ಲಾಕ್ ಡೌನ್ ಹೇರಿಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆರ್ಥಿಕತೆ ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


