ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ, ಪರೀಕ್ಷೆ ಹೆಚ್ಚಿಸಲು ಕ್ರಮ: ಡಾ.ಸುಧಾಕರ್

ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ದಿನ 15 ರಿಂದ 20 ಸಾವಿರದ ವರೆಗೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ದಿನ 15 ರಿಂದ 20 ಸಾವಿರದ ವರೆಗೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ 19 ಸೋಂಕು ವಿರುದ್ಧದ ಹೋರಾಟದಲ್ಲಿ ರಾಜ್ಯದ ಮುಂದಿನ ನಡೆ, ರೂಪುರೇಷೆಗಳಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು, ಕಳೆದೆರಡು ವಾರಗಳಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ದ್ವಿಗುಣಗೊಂಡಿದೆ ಎಂದರು.

ಹೊರ ರಾಜ್ಯಗಳಲ್ಲಿ ಕೊರೋನಾ ನಿಯಂತ್ರಣ ಹೇಗೆ ಎನ್ನುವ ಕುರಿತಂತೆಯೂ ಪರಿಶೀಲಿಸುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗಾಗಿ ಸರ್ಕಾರದೊಂದಿಗೆ ಪಾಲುದಾರಿಕೆ ಹೊಂದಬೇಕು. ಸರ್ಕಾರ ಚಿಕಿತ್ಸಾ ದರ ನಿಗದಿ ಮಾಡಲಿದ್ದು, ಖಾಸಗಿ ಆಸ್ಪತ್ರೆ ಗಳಲ್ಲಿ ಪರೀಕ್ಷೆ ಮಾಡಿಸಿದವರಿಗೆ ಸೋಂಕು ಕಂಡು ಬಂದರೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com