'ವೀರ ಸೈನಿಕರ ತ್ಯಾಗ ವ್ಯರ್ಥವಾಗಬಾರದು; ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು'

ದೇಶಕ್ಕಾಗಿ ಬೆವರು - ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ , ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದ್ದು, ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಗಡಿಯಲ್ಲಿ ಭಾರತೀಯ ಯೋಧರು
ಗಡಿಯಲ್ಲಿ ಭಾರತೀಯ ಯೋಧರು
Updated on

ಬೆಂಗಳೂರು: ದೇಶಕ್ಕಾಗಿ ಬೆವರು - ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ , ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದ್ದು, ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಚೀನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುದರನ್ನು ಖಂಡಿಸಿರುವ ಸಿದ್ದರಾಮಯ್ಯ ''ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು'' ಎಂದು ಟೀಕಿಸಿದ್ದಾರೆ.

ಚೀನಾ- ಭಾರತ ಘರ್ಷಣೆ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸಿ, ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ತಿಳಿಸಿದ್ದಾರೆ. ಶತ್ರು ದೇಶದ ವಿರುದ್ಧ ಹೋರಾಡುವುದು ಬರೀ ಸರ್ಕಾರ ಅಲ್ಲ ಇಡೀ ದೇಶ. ಸರ್ಕಾರ ದೇಶಕ್ಕೆ , ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆ ಕೇಂದ್ರ ಸರ್ಕಾರದ್ದಾಗಿದೆ ಎಂದು ಅವರು
ನೆನಪಿಸಿದ್ದಾರೆ. 

ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ರಾಜನಾಥ್ ಸಿಂಗ್ ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆಳುವವರ ಮೌನ ಜನದ್ರೋಹ ಮಾತ್ರವಲ್ಲ , ದೇಶದ್ರೋಹವೂ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com