ವಿಕಾಸ ಸೌಧದಲ್ಲಿ ಸೋಂಕು ನಿವಾರಕ ಔಷಧಿ ಸಿಂಪಡಣೆ: ಶುಕ್ರವಾರ ರಜೆ

ಕೊರೋನಾ ಸೋಂಕು ನಿಯಂತ್ರಣ ಭಾಗವಾಗಿ ವಿಕಾಸಸೌಧ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ ಕೆಲಸಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಭಾಗವಾಗಿ ವಿಕಾಸಸೌಧ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ ಕೆಲಸಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

ಇತ್ತೀಚೆಗೆ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ವಿಕಾಸ ಸೌಧದಲ್ಲಿ ಸುತ್ತಾಡಿದ ಹಿನ್ನೆಲೆಯಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು.

ಸಚಿವಾಲಯದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮವಾಗಿ ಮತ್ತು ವೈರಸ್ ಹರಡುವುದನ್ನು ತಪ್ಪಿಸಲು ಗುರುವಾರ ಸಂಜೆ ವಿಕಾಸಸೌಧ ಕಟ್ಟಡದ ಎಲ್ಲಾ ಕೊಠಡಿಗಳು ಮತ್ತು ಕಾರಿಡಾರ್ ಗಳಿಗೆ ಬಿ.ಬಿ.ಎಂ.ಪಿ. ವತಿಯಿಂದ ಕ್ರಿಮಿ ನಾಶಕವನ್ನು ಪೂರ್ಣ ಪ್ರಮಾಣದಲ್ಲಿ ಸಿಂಪಡಿಸಲಾಯಿತು. 

ಹೀಗಾಗಿ ವಿಕಾಸಸೌಧ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೇ ಶುಕ್ರವಾರದಂದು ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com