ರಾಜ್ಯ

ರಾಜ್ಯದಲ್ಲಿ ಒಂದೇ ದಿನ ಕೊರೋನಾ ವೈರಸ್'ಗೆ 12 ಮಂದಿ ಬಲಿ: ಬೆಂಗಳೂರು ಒಂದರಲ್ಲೇ ನಿನ್ನೆ 8 ಮಂದಿ ಸಾವು

ರಾಜ್ಯದಲ್ಲಿ ಒಂದೇ ದಿನ ಕೊರೋನಾ ವೈರಸ್'ಗೆ 12 ಮಂದಿ ಬಲಿ: ಬೆಂಗಳೂರು ಒಂದರಲ್ಲೇ ನಿನ್ನೆ 8 ಮಂದಿ ಸಾವು
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಾವಿನ ವೇಗ ಮತ್ತಷ್ಟು ಹೆಚ್ಚಾಗುತ್ತಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 12 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲಿಯೇ 8 ಮಂದಿ ಮೃತಪಟ್ಟಿದ್ದು, ಈ ಮೂಲಕ ಬೆಂಗಳೂರು ಹಾಗೂ ರಾಜ್ಯ ಎರಡರಲ್ಲೂ ಈ ವರೆಗೆ ದಿನವೊಂದರಲ್ಲಿ ಅತ್ಯಧಿಕ ಸಂಖ್ಯೆಯ ಸಾವು ವರದಿಯಾದಂತಾಗಿದೆ. 

ರಾಜ್ಯದಲ್ಲಿ ಈ ವರೆಗೆ ಒಂದೇ  ದಿನ 10 ಸಾವು ವರದಿಯಾಗಿದ್ದೇ ದಾಖಲೆಯಾಗಿತ್ತು. ಗುರುವಾರದ 12 ಸಾವಿನ ಮೂಲಕ ಆತ್ಮಹತ್ಯೆ ಸೇರಿ ಅನ್ಯ ಕಾರಣದಿಂದ ಮೃತಪಟ್ಟ 4 ಮಂದಿ ಸೋಂಕಿತರನ್ನು ಹೊರತುಪಡಿಸಿ ಒಟ್ಟು ಸಾವಿನ ಸಂಖ್ಯೆ 114ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಟ್ಟು 844 ಸೋಂಕಿತರಲ್ಲಿ ಒರೋಬ್ಬರಿ 51 ಮಂದಿ ಮೃತಪಟ್ಟಿದ್ದು ಸಾವಿನ ದರ ಶೇ.6.4ಕ್ಕೆ ಏರಿಕೆಯಾಗಿದ್ದು, ತೀವ್ರ ಆತಂಕ ಸೃಷ್ಟಿಸಿದೆ. 

ರಾಜ್ಯದಲ್ಲಿ ಕಳೆದ 18 ದಿನಗಳಲ್ಲಿ 64 ಮಂದಿ ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ ಕಳೆದ 3 ದಿನಗಳಲ್ಲೇ ಬರೋಬ್ಬರಿ 18 ಮಂದಿ ಮೃತಪಟ್ಟಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ 8, ಬೀದರ್, ವಿಜಯಪುರ, ಕಲಬುರಗಿ, ಕೊಪ್ಪಳದಲ್ಲಿ ತಲಾ ಒಂದು ಸಾವು ವರದಿಯಾಗಿದೆ. ಈ ಪೈಕಿ ಜೂ.6 ರಂದು ಬೆಂಗಳೂರಿನಲ್ಲಿ ಮೃತಪಟ್ಟಿದ್ದ 57 ವರ್ಷದ ಸೋಂಕಿತ ವ್ಯಕ್ತಿಯ ಸಾವನ್ನು 12 ದಿನಗಳ ಬಳಿಕ ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ. 

ಬೀದರ್ ನಲ್ಲಿ ಕಂಟೈನ್ಮೆಂಟ್ ಝೋನ್ ನಲ್ಲಿ ರ್ಯಾಂಡಮ್ ಪರೀಕ್ಷೆ ವೇಳೆ ಜೂ.8ರಂದು ಸೋಂಕು ಖಚಿತಪಟ್ಟಿದ್ದ 55 ವರ್ಷದ ಮಹಿಳೆ ಜೂ.18 ರಂದು ಮೃತಪಟ್ಟಿದ್ದಾರೆ. ವಿಜಯಪುರದಲ್ಲಿ ತೀವ್ರ ಉಸಿರಾಟ ತೊಂದರೆ ಹಿಂದಿದ್ದ 66 ವರ್ಷದ ಮಹಿಳೆ ಜೂ.15ರಂದು ಆಸ್ಪತ್ರೆಗೆ ದಾಖಲಾಗಿ 17 ರಂದು ಮೃತರಾಗಿದ್ದಾರೆ. 

ಕಲಬುರಗಿಯಲ್ಲಿ ಜ್ವರ, ಉಸಿರಾಟ ಸಮಸ್ಯೆಯಿಂದ ಜೂ.13ರಂದು ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ವ್ಯಕ್ತಿ ಜೂ.15ರಂದು ಸಾವನ್ನಪ್ಪಿದ್ದಾರೆ. ಕೊಪ್ಪಳದಲ್ಲಿ ತೀವ್ರ ಉಸಿರಾಟ ತೊಂದರೆ ಕೆಮ್ಮು,ಜ್ವರದ ಹಿನ್ನೆಲೆಯೊಂದಿಗೆ ಜೂ.13ರಂದು ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಮಹಿಳೆ ಜೂ.17ರಂದು ಮೃತಪಟ್ಟಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.