ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ: ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ: ಎಚ್  ಡಿ ಕುಮಾರಸ್ವಾಮಿ

ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on: 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು,  ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು ಚಾಮರಾಜಪೇಟೆ ಏರಿಯಾಗಳನ್ನು ಜೂನ್ 30ರವರೆಗೆ ಸೀಲ್ ಡೌನ್ ಮಾಡಲು ಸರ್ಕಾರ ಮುಂದಾಗಿದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್
ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ.ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com