ಕೋವಿಡ್-19 ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸುತ್ತಿರುವ ಪ್ರತೀಯೊಬ್ಬರ ವಿರುದ್ಧ ಪ್ರಮುಖವಾಗಿ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸುತ್ತಿರುವ ಪ್ರತೀಯೊಬ್ಬರ ವಿರುದ್ಧ ಪ್ರಮುಖವಾಗಿ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 

ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನಪ್ರತಿನಿಧಿಗಳು ಹೆಚ್ಚು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು. 

ಈ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿರುವ ಹೈಕೋರ್ಟ್ ವಿಭಾಗೀಯ ಪೀಠ, ನಿಯಮ ಉಲ್ಲಂಘನೆ ಮಾಡುವ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ಅಲ್ಲದೆ, ಸಾರ್ವಜನಿಕರು ವಾಟ್ಸ್ ಆ್ಯಪ್, ದೂರವಾಣಿ ಕರೆ, ಎಸ್ಎಂಎಸ್ ಮೂಲಕ ದೂರು ನೀಡಲು ಕುಂದು ಕೊರತೆ ಪರಿಹಾರ ಕಾರ್ಯತಂತ್ರವನ್ನು ರೂಪಿಸುವಂತೆ ಸರ್ಕಾರ ಆದೇಶಿಸಿದೆ. 

ವಾರದೊಳಗೆ ರಾಜ್ಯ ಸರ್ಕಾರ ಕುಂದು ಕೊರತೆ ಪರಿಹಾರ ರೂಪಿಸಬೇಕು. ವಿಪತ್ತು ನಿರ್ವಹಣಾ ಕಾಯ್ದೆಯಡಿ ಪೊಲೀಸರು ಸಾರ್ವಜನಿಕರು ನೀಡಿದ ದೂರನ್ನು ದಾಖಲಿಸಬೇಕು. ಅಲ್ಲಿ ದಾಖಲಾಗುವ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಪೀಠ ಸೂಚಿಸಿದೆ. ಅಲ್ಲದೆ, ಈ ಆದೇಶ ಪಾಲನೆ ಬಗ್ಗೆ 2 ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com