ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿಯಲ್ಲಿ ಮತ್ತಿಬ್ಬರಲ್ಲಿ ವೈರಸ್ ಪತ್ತೆ: ಹೆಚ್ಚಿದ ಆತಂಕ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿಯಲ್ಲಿ ಕಳೆದ 48 ಗಂಟೆಗಳಲ್ಲಿ ಮತ್ತಿಬ್ಬರು ವ್ಯಕ್ತಿಗಳಲ್ಲಿ ವೈರಸ್ ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿಯಲ್ಲಿ ಕಳೆದ 48 ಗಂಟೆಗಳಲ್ಲಿ ಮತ್ತಿಬ್ಬರು ವ್ಯಕ್ತಿಗಳಲ್ಲಿ ವೈರಸ್ ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. 

ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಹಾಗೂ ಉದ್ಯಾನ ನಿರ್ವಹಣೆ ಕೆಲಸಗಾರನಲ್ಲಿ ಶುಕ್ರವಾರ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಇದೀಗ ಇಬ್ಬರನ್ನು ಕೋವಿಡ್ ನಿಯೋಜಿತ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರಿಬ್ಬರ ಕುಟುಂಬಸ್ಥರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಇದರೊಂದಿಗೆ ಸಿಎಂ ಗೃಹ ಕಚೇರಿಯಲ್ಲಿ ಈ ವರೆಗೂ 6 ಸಿಬ್ಬಂದಿಗಳಲ್ಲಿ ವೈರಸ್ ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. 

ಈ ಹಿಂದೆ ಕೂಡ ಇಬ್ಬರು ಪೊಲೀಸ್ ಅಧಿಕಾರಿಗಳು, ಓರ್ವ ಅಗ್ನಿಶಾಮಕದಳದ ಸಿಬ್ಬಂದಿಗ ಹಾಗೂ ಓರ್ವ ಎಲೆಕ್ಟ್ರಿಷಿಯನ್'ನಲ್ಲಿ ವೈರಸ್ ಪತ್ತೆಯಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿ ಗಳು ಉನ್ನತಾಧಿಕಾರಿಗಳೊಂದಿಗೆ ಸಬೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ. 

ಈ ನಡುವೆ ಮುಖ್ಯಮಂತ್ರಿಗಳ ಕುಟುಂಬ ಸದಸ್ಯರನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಯಾರೊಬ್ಬರಿಗೂ ವೈರಸ್ ತಗುಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಸೋಂಕು ತಗುಲಿರುವ ಇಬ್ಬರು ವ್ಯಕ್ತಿಗಳು 27 ಮತ್ತು 57 ವರ್ಷದ ವಯಸ್ಸಿನವರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com