ಬೆಂಗಳೂರು: ಕೊರೋನಾ ಸೋಂಕಿತನ ಮನೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಮೊತ್ತದ ಚಿನ್ನಾಭರಣ ದೋಚಿದ ಕಳ್ಳರು!

ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಕುಟುಂಬದ ಮನೆಯಲ್ಲಿ ಕಳ್ಳತನ ಆಗಿರುವ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.
ಚಿನ್ನಾಭರಣ
ಚಿನ್ನಾಭರಣ
Updated on: 

ಬೆಂಗಳೂರು: ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಕುಟುಂಬದ ಮನೆಯಲ್ಲಿ ಕಳ್ಳತನ ಆಗಿರುವ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

ಕಳೆದ ಶನಿವಾರ ಮನೆ ಮಾಲೀಕನಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ವರದಯಿಂದ ದೃಢಪಟ್ಟಿತ್ತು. ಹೀಗಾಗಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮನೆಯವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಅಧಿಕಾರಿಗಳು ಸ್ಥಳಾಂತರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಕಳ್ಳರು ಕಿಟಿಕಿ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದಾರೆ.

ಕ್ವಾರಂಟೈನ್ ಮುಗಿಸಿ ಸೋಂಕಿತರ ಪತ್ನಿ ಮತ್ತು ಮಗ ಮನೆಗೆ ವಾಪಸ್ಸಾದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ವಾಗಿರಬಹುದು ಎಂದು ಅಂದಾಜಿಸಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com