ಪೊಲೀಸರಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ಹಲವು ಪೊಲೀಸ್ ಠಾಣೆಗಳ ಸ್ಥಳಾಂತರ

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭದ್ರತೆ ನೀಡುವ ಕಾರ್ಯವನ್ನು ಮಾಡುತ್ತಿರುವ ಪೊಲೀಸರನ್ನು ಮಹಾಮಾರಿ ವೈರಸ್ ಎಡೆಬಿಡದೆ ಕಾಡುತ್ತಿದೆ. ನಗರದಲ್ಲಿ ಈ ವರೆಗೂ 123 ಮಂದಿ ಪೊಲೀಸರಲ್ಲಿ ವೈರಸ್ ಪತ್ತೆಯಾಗಿದ್ದು, ನಾಲ್ವರು ಪೊಲೀಸರು ಬಲಿಯಾಗಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭದ್ರತೆ ನೀಡುವ ಕಾರ್ಯವನ್ನು ಮಾಡುತ್ತಿರುವ ಪೊಲೀಸರನ್ನು ಮಹಾಮಾರಿ ವೈರಸ್ ಎಡೆಬಿಡದೆ ಕಾಡುತ್ತಿದೆ. ನಗರದಲ್ಲಿ ಈ ವರೆಗೂ 123 ಮಂದಿ ಪೊಲೀಸರಲ್ಲಿ ವೈರಸ್ ಪತ್ತೆಯಾಗಿದ್ದು, ನಾಲ್ವರು ಪೊಲೀಸರು ಬಲಿಯಾಗಿದ್ದಾರೆ. 

ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಠಾಣೆಗಳು ಸೀಲ್'ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಗಳನ್ನು ಸ್ಥಳಾಂತರ ಮಾಡುವ ಕಾರ್ಯಗಳು ನಡೆಯುತ್ತಿವೆ. ಕೆಲವೆಡೆ ಸೀಲ್ಡೌನ್ ಆದ ಪೊಲೀಸ್ ಠಾಣೆಗಳ ಎದುರೇ ಕಿಯೋಸ್ಕ್ (ಅತ್ಯಾಧುನಿಕ ಪೊಲೀಸ್ ಚೌಕಿ) ಸ್ಥಾಪನೆ ಮಾಡಲಾಗುತ್ತಿದ್ದು, ಕರ್ತವ್ಯಗಳನ್ನು ಎಂದಿನಂದೆ ಮುಂದುವರೆಸಲಾಗುತ್ತಿದೆ. 

ಕೆಲ ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆಯ 73 ಮಂದಿ ಪೊಲೀಸರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಮಡಿವಾಳ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಹೀಗಾಗಿಯ ಠಾಣೆಯ ಮುಂದೆ ಕಿಯೋಸ್ಕ್ ಸ್ಥಾಪನೆ ಮಾಡಲಾಗಿದ್ದು, ಸಾರ್ವಜನಿಕರು ಅಥವಾ ಇತರೆ ಸಿಬ್ಬಂದಿಗಳು ಸಂಪರ್ಕಿಸದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ಕೇಂದ್ರೀಯ ವಿಭಾಗ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಸಿಬ್ಬಂದಿಯೊಬ್ಬರಲ್ಲಿ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿತ್ತು. ಇದೀಗ ಎಲ್ಲಾ ಸಿಬ್ಬಂದಿಗಳನ್ನು ವಿಧಾನಸೌಧ ಪೊಲೀಸ್ ಠಾಣೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com